ಶಿಲಾ ಸ್ಮಾರಕಕ್ಕೆ ಚಳ್ಳೆಕೂಡ್ಲೂರು ಆಯ್ಕೆ

NR Manjunatha Swamy Siraguppa Tahasildar
ಸಿರಗುಪ್ಪ ತಹಸೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ
Published on

ಸಿರಗುಪ್ಪ: ಮರೆತುಹೋದ ಮಹನೀಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಮೃತ ಭಾರತಿಗೆ ಕನ್ನಡದಾರತಿ ಎಂಬ ಹೆಸರಿನಲ್ಲಿ ಇಡೀ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ ಎಂದು ತಹಸೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ ಹೇಳಿದರು.

ನಗರದ ತಾಲೂಕು ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ 75 ಸ್ಥಳಗಳನ್ನು ರಾಜ್ಯಾದ್ಯಂತ ಗುರುತಿಸಿ, ಆ ಸ್ಥಳಗಳಲ್ಲಿ ಶಿಲಾ ಸ್ಮಾರಕ ನಿರ್ಮಿಸಲಾಗುವುದು. ಸಿರಗುಪ್ಪದ ಚಳ್ಳೆಕೂಡ್ಲೂರು ಗ್ರಾಮವನ್ನು ಆಯ್ಕೆಮಾಡಿಕೊಳ್ಳಲಾಗಿದ್ದು, ಈ ಗ್ರಾಮದಲ್ಲಿ ಶಿಲಾ ಸ್ಮಾರಕ ನಿರ್ಮಿಸಿ ನಂತರ ನಗರದ ಗಾಂಧೀಜಿ ವೃತ್ತದಿಂದ ತಾಲೂಕು ಕ್ರೀಡಾಂಗಣದ ವರೆಗೆ ಜಾಥಾ ನಡೆಸಲಾಗುವುದು. ಸಂಜೆ 5ಗಂಟೆಯಿಂದ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದರು. ತಾಲೂಕು ಸಮಿತಿ ಸಂಚಾಲಕ ಎಂ.ಎಸ್.ಸಿದ್ದಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net