ಇವಿಎಂ ಯಂತ್ರ ಒಡೆದು ಹಾಕಿದ್ದ ವ್ಯಕ್ತಿಯಿಂದ ಮುಖ್ಯಮಂತ್ರಿ ಮನೆ ಮೇಲೆ ಕಲ್ಲುತೂರಾಟ

Untitled design - 2023-10-10T164948.379
Published on

ಮೈಸೂರು: ಶಾರದಾದೇವಿನಗರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಮೇಲೆ ವ್ಯಕ್ತಿಯೊಬ್ಬ ಕಲ್ಲು ತೂರಾಟ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹೂಟಗಳ್ಳಿ ನಿವಾಸಿ ಶಿವಮೂರ್ತಿ ಬಂಧಿತ ಆರೋಪಿ. ಈತ ಮಂಗಳವಾರ ಬೆಳಗ್ಗೆ 8ಕ್ಕೆ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿ ಕಲ್ಲು ತೂರಾಟ ನಡೆಸಿದ್ದೇನೆ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಆರೋಪಿಯನ್ನು ಬಂಧಿಸಿದರು. ಪೊಲೀಸರು ಪರಿಶೀಲನೆ ಪೂರ್ಣಗೊಳಿಸಿದ ನಂತರ ತಕ್ಷಣ ಒಡೆದ ಗಾಜುಗಳನ್ನು ತೆರವುಗೊಳಿಸಿ ಹೊಸ ಗಾಜುಗಳನ್ನು ಅಳವಡಿಸಲಾಗಿದೆ.

ಈತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಹೂಟಗಳ್ಳಿ ಸರ್ಕಾರಿ ಪ್ರೌಢ ಶಾಲಾ ಮತಗಟ್ಟೆಯಲ್ಲಿ ಈತ ಮತ ಚಲಾಯಿಸಿದ ನಂತರ ಇವಿಎಂ ಕಂಟ್ರೋಲ್ ಯೂನಿಟ್‌ಅನ್ನು ಒಡೆದು ಹಾಕಿದ್ದ. ಇತ್ತೀಚೆಗೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರ ಕುರಿತು ‘ರೌಡಿ ರಾಜೇಂದ್ರ’ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net