

ರಾಯಚೂರು: ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರಗಳಿಗೆ ತನ್ನದೇ ಆದ ಅಕಾರವಿದ್ದು, ರಾಜ್ಯದ ಆಡಳಿತದಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಲು ರಾಷ್ಟ್ರಪತಿಗಳು ಮುಂದಾಗಬೇಕು ಎಂದು ಸಿಪಿಐಎಂ ಒತ್ತಾಯಿಸಿದೆ.
ಪಕ್ಷದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಗುರುವಾರ ಮನವಿ ಸಲ್ಲಿಸಿ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಮೇಲೆ ತನ್ನ ಅಕಾರ ಚಲಾವಣೆ, ದುರುಪಯೋಗ ಮಾಡಿಕೊಳ್ಳುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯಲು ಕೇಂದ್ರ ಸರ್ಕಾರ ಅಡ್ಡಿಯಾಗಬಾರದು. ಕರ್ನಾಟಕಕ್ಕೆ ಬರ ಪರಿಹಾರ ಅನುದಾನ ಬಿಡುಗಡೆ ಮಾಡಬೇಕು. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಸಂಬಂಸಿದಂತೆ ರಾಜ್ಯದ ವಿಷಯಗಳಲ್ಲಿ ಕೇಂದ್ರ ಮಧ್ಯ ಪ್ರವೇಶ ಮಾಡಬಾರದು.
ರಾಜ್ಯ ಸರ್ಕಾರಗಳು ತಮಗೆ ತೋಚಿದಂತೆ ಸಾಲ ಪಡೆಯುವುದನ್ನು ನಿಲ್ಲಿಸಬೇಕು. ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ಪದಾಕಾರಿಗಳಾದ ಡಿ.ಎಸ್.ಶರಣಬಸವ, ಕರಿಯಪ್ಪ ಅಚ್ಚೊಳ್ಳಿ, ಬಸವರಾಜ, ಮಾರೆಪ್ಪ ಇದ್ದರು.