

ರಾಯಚೂರು: ಆದೇಶ ಉಲ್ಲಂಸಿ ನಿಯಮ ಬಾಹಿರವಾಗಿ ದುಬಾರಿ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಿಪಿಐಎಂಎಲ್ ರೆಡ್‌ಸ್ಟಾರ್ ಒತ್ತಾಯಿಸಿದೆ.
ಪಕ್ಷದ ನಿಯೋಗ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯದ ಅೀಕ್ಷಕ ಶಿವರಾಜಗೆ ಸೋಮವಾರ ಮನವಿ ಸಲ್ಲಿಸಿ, ಖಾಸಗಿ ಶಿಕ್ಷಣ ಸಂಸ್ಥೆಗಳು ಮಿತಿ ಮೀರಿದ ಶುಲ್ಕ ವಸೂಲಿ ಮಾಡುತ್ತಿರುವುದರಿಂದ ಬಡ ಜನರು ಸಂಕಷ್ಟ ಎದುರಿಸುವಂತಾಗಿದೆ ಎಂದು ದೂರಿದರು.
ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳಿಂದ ಪಡೆಯಬೇಕಾಗಿರುವ ಶುಲ್ಕವನ್ನು ನಿಗದಿಪಡಿಸಿದೆ. ಆದರೆ ಖಾಸಗಿ ಶಿಕ್ಷಣ ಸಂಸ್ಥೆಗಳು ಯಾವುದೇ ರಸೀದಿ ನೀಡದೆ ವಿದ್ಯಾರ್ಥಿಗಳ ಪಾಲಕರಿಂದ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿದ್ದಾರೆ. ಜತೆಗೆ ಪಠ್ಯಪುಸ್ತಕ, ಸಮವಸ ಸೇರಿದಂತೆ ಇನ್ನಿತರ ಹೆಸರಿನಲ್ಲಿ ಹಣವನ್ನು ಪಡೆಯುತ್ತಿವೆ.
ಇದರಿಂದಾಗಿ ಬಡ, ಕೂಲಿ ಕಾರ್ಮಿಕರ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗದಂತಾಗಿದೆ. ಕಾರಣ ಎಲ್ಲ ಖಾಸಗಿ ಶಾಲೆಗಳ್ಲಲಿ ಸರ್ಕಾರ ನಿಗದಿಪಡಿಸಿದ ಶುಲ್ಕದ ಮಾಹಿತಿ ಲಕ ಹಾಕಿ ಅದರಂತೆ ಶುಲ್ಕ ಪಡೆಯುವಂತೆ ಕಟ್ಟು ನಿಟ್ಟಿನ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.
ನಿಯೋಗದಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯ ಜಿ.ಅಮರೇಶ, ಜಿಲ್ಲಾ ಸಮಿತಿ ಸದಸ್ಯ ಅಜೀಜ್ ಜಾಗೀರದಾರ್, ಪದಾಕಾರಿಗಳಾದ ಸೈಯದ್ ಅಬ್ಬಾಸ್ ಅಲಿ, ನಿರಂಜನಕುಮಾರ, ಲಕ್ಷ್ಮಣ ಇದ್ದರು.