ಕಾಯ್ದೆ ಜಾರಿಯಾಗಿ 30 ವರ್ಷ ಗತಿಸಿದರೂ ನಿಲ್ಲದ Female foeticide

Girl Child
Published on

ಕಾರವಾರ: female foeticide ತಡೆಯಲು ಎಲ್ಲ ಅಧಿಕಾರಿಗಳು ಗಂಭೀರ ಕ್ರಮ ವಹಿಸಬೇಕು ಎಂದು ಅಪರ‌ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.

ಒಂದು ಜೀವವು ಜಗತ್ತಿಗೆ ಕಾಲಿಡುವ ಪೂರ್ವದಲ್ಲೇ ಹತ್ಯೆ ಮಾಡುವುದು ದೊಡ್ಡ ಅಪರಾಧವಾಗಿದ್ದು, ಸಮಾಜದಲ್ಲಿನ ಗಂಡು ಹೆಣ್ಣು ತಾರತಮ್ಯವನ್ನು ತಡೆಗಟ್ಟಲು ಅನುಷ್ಠಾನ ಅಧಿಕಾರಿಗಳು ತಮ್ಮ ಜವಾಬ್ದಾರಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದರು. ಅವರು ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಪ್ರಸವ ಪೂರ್ವ ಲಿಂಗ ಪರೀಕ್ಷೆ ಪ್ರತಿಬಂಧಕ ಕಾಯ್ದೆ (PCPNDT ACT) ಕುರಿತ ಒಂದು ದಿನದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

female foeticide ತಡೆಯಿರಿ

ಪ್ರಸವ ಪೂರ್ವ ಲಿಂಗ ಪರೀಕ್ಷೆ ಪ್ರತಿಬಂಧಕ ಕಾಯ್ದೆ ಜಾರಿಗೆ ಬಂದು 30 ವರ್ಷ ಗತಿಸಿದರೂ ಅಮಾನವೀಯ ಹಾಗೂ ಅಪರಾಧ ಕೃತ್ಯಗಳು ಇನ್ನೂ ಮುಂದುವರೆದಿರುವುದು ವಿಷಾಧನೀಯವಾಗಿದೆ. ಶಿಶು ಹತ್ಯೆಯ ಗಂಭೀರತೆಯನ್ನು ಅರ್ಥ ಮಾಡಿಕೊಂಡು ಅನುಷ್ಠಾನ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಹಾಗೂ ನಿಯಮಿತವಾಗಿ ಸ್ಕಾö್ಯನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.

ವೈದ್ಯರು ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದರ ಜೊತೆಗೆ ಪೋಷಕರಿಗೆ ಪ್ರಸವ ಪೂರ್ವ ಲಿಂಗ ಪತ್ತೆ ಹಚ್ಚುವುದು ಶಿಕ್ಷಾರ್ಹ ಅಪರಾಧ ಎಂಬುದನ್ನು ಮನದಟ್ಟು ಮಾಡಬೇಕು ಹಾಗೂ ಜಿಲ್ಲೆಯಲ್ಲಿ ಭ್ರೂಣ ಹತ್ಯೆಯಂತಹ ಘಟನೆಗಳು ನಡೆಯದಂತೆ ಮಾನವೀಯತೆ ನೆಲೆಯಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರಿ ಸಿ. ಎಂ ಮಾತನಾಡಿ, ಮಹಿಳೆ ಯಾವುದರಲ್ಲೂ ಕಡಿಮೆಯಿಲ್ಲ. ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನದೇಯಾದ ಛಾಪು ಮೂಡಿಸಿದ್ದಾಳೆ. ಹೆಣ್ಣು ಯಾವತ್ತು ಹೊರೆಯಲ್ಲ ಎಂದು ತಿಳಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಹೆಣ್ಣು ಸಮಾಜದಲ್ಲಿ ಸುರಕ್ಷಿತವಾಗಿ ಬದುಕಲು ವಾತಾವರಣ ಕಲ್ಪಿಸುವುದು ಅವಶ್ಯಕವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಆಡಳಿತ ) ನಾಗೇಶ ರಾಯ್ಕರ ಮಾತನಾಡಿ ಸಮಾಜದಲ್ಲಿ ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವ ಘಟನೆಗಳು ಹೆಚ್ಚು ಕಳವಳಕಾರಿಯಾಗಿದ್ದು, ಈ ರೀತಿಯ ಘಟನೆಗಳು ಮರಕಳಿಸದಂತೆ ಎಚ್ಚರವಹಿಸಬೇಕಾಗಿದ್ದು ನಮ್ಮ ಕರ್ತವ್ಯವಾಗಿದೆ ಎಂದರು.

ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷಗೌಡ ಪಾಟೀಲ್, ಡಿವೈಸ್ಪಿ ಎಸ್. ವಿ ಗಿರೀಶ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಅನ್ನಪೂರ್ಣ ವಸ್ತ್ರದ, ಆರ್‌ಸಿಎಚ್ ಅಧಿಕಾರಿ ಡಾ. ನಟರಾಜ, ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ , ನಿವೃತ್ತ ಸಮಾಜಶಾಸ್ತ್ರ ಉಪನ್ಯಾಸಕ ಡಿ.ಆರ್. ನಾಯ್ಕ. ವಿವಿಧ ಇಲಾಖೆಯ ಅನುಷ್ಠಾನ ಅಧಿಕಾರಿಗಳು ಆಶಾ ಕಾರ್ಯಕರ್ತರು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net