

ರಾಯಚೂರು: ಕಳೆದ ಒಂದು ವಾರದಿಂದ ರಾಯಚೂರು ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅನಿಯಮಿತವಾಗಿ ವಿದ್ಯುತ್ ಲೋಡ್ ಶೆಡ್ಡಿಂಗ್ ನಡೆಸುವುದನ್ನು ನಿಲ್ಲಿಸದಿದ್ದಲ್ಲಿ ರೈತರೊಂದಿಗೆ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ರಾಯಚೂರು ಗ್ರಾಮೀಣ ಘಟಕದ ಅಧ್ಯಕ್ಷ ನಿಜಾಮುದ್ದೀನ್ ತಿಳಿಸಿದರು.
ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಮುಂಗಾರು ವಿಲವಾಗಿ ರೈತರು ಸಂಕಷ್ಟದಲ್ಲಿದ್ದು, ರೈತರ ಪಂಪ್‌ಸೆಟ್‌ಗೆ 12 ಗಂಟೆ ಬದಲು ಮಧ್ಯರಾತ್ರಿ 12 ರಿಂದ ಬೆಳಗಿನ ಜಾವ 5ರವರೆಗೆ ಕೇವಲ ಐದು ಗಂಟೆ ವಿದ್ಯುತ್ ನೀಡಲಾಗುತ್ತಿದೆ ಎಂದು ದೂರಿದರು.
ಇಂಧನ ಖಾತೆ ಸಚಿವರು ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಸಂಜೆ 6 ರಿಂದ ರಾತ್ರಿ 10ರವರೆಗೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ವಿದ್ಯುತ್ ಉಪ ಕೇಂದ್ರಗಳಲ್ಲಿನ ದಿನಚರಿ ಪುಸ್ತಕ ಪರಿಶೀಲಿಸಿದರೆ ದಿನಕ್ಕೆ ಎಷ್ಟು ಬಾರಿ ವಿದ್ಯುತ್ ಕಡಿತಗೊಂಡಿದೆ ಎನ್ನುವುದು ತಿಳಿದು ಬರಲಿದೆ.
ಪಂಪ್‌ಸೆಟ್‌ಗಳಿಗೆ 12 ಗಂಟೆ ವಿದ್ಯುತ್ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ವಾಸ್ತವವಾಗಿ ಐದು ಗಂಟೆ ಕೂಡಾ ಮೂರು ೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿಲ್ಲ. ಅದರಲ್ಲೂ ಮಧ್ಯರಾತ್ರಿ ವಿದ್ಯುತ್ ಸರಬರಾಜು ಮಾಡುತ್ತಿರುವುದರಿಂದ ರೈತರು ಬೆಳೆಗಳಿಗೆ ನೀರು ಹರಿಸಲು ಸಮಸ್ಯೆ ಎದುರಿಸುವಂತಾಗಿದೆ.
ಸರ್ಕಾರ ವಿದ್ಯುತ್ ಪೂರೈಕೆಯಲ್ಲಿ ಸಂಪೂರ್ಣ ವಿಲವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಉತ್ಪಾದಿಸುವ ನೀಡುವ ತಾಲೂಕಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಜತೆಗೆ ವೈಟಿಪಿಎಸ್ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸುವುದನ್ನು ಕೈಬಿಡಬೇಕು. ವಾರದೊಳಗೆ ಸಮಸ್ಯೆ ಇತ್ಯರ್ಥಗೊಳಿಸದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ನಿಜಾಮುದ್ದೀನ್ ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾಧ ರಾಘವೇಂದ್ರ ನಾಯಕ, ಮಹ್ಮದ್ ರಫಿ, ಗುಜ್ಜಲ ತಾಯಪ್ಪ, ಉಪ್ಪಳ ಬಡೇಸಾಬ್ ಉಪಸ್ಥಿತರಿದ್ದರು.