

ರಾಯಚೂರು: ಮುಂಗಾರು ಮಳೆ ವಿಲವಾಗಿ ಬೆಳೆಗಳು ಹಾನಿಗೊಳಗಾಗಿ ರೈತರು ಸಂಕಷ್ಟದಲ್ಲಿದ್ದು ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‌ಗಳು ರೈತರಿಗೆ ಸಾಲ ಮರುಪಾವತಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಕಾರಿ ಕಚೇರಿ ಮುಂದೆ ಕರ್ನಾಟಕ ರೈತ ಸಂಘದಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ರೈತರು ಸಂಕಷ್ಟದಲ್ಲಿದ್ದರೂ ಬ್ಯಾಂಕ್ ಅಕಾರಿಗಳು ರೈತರಿಗೆ ಸಾಲ ಮರುಪಾವತಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ದೂರಿದರು.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮುಂಗಾರು ಮತ್ತು ಹಿಂಗಾರು ವಿಲವಾಗಿ ರೈತರು ಬೆಳೆಗಳು ಹಾನಿಗೊಳಗಾಗಿವೆ. ರೈತರು ಸಾಲ ಮಾಡಿ ಬಿತ್ತನೆ ಬೀಜ, ಗೊಬ್ಬರ, ಕ್ರಿಮಿನಾಶಕ ತಂದು ಬಿತ್ತನೆ ಮಾಡಿದ್ದು, ಬೆಳೆ ಕೈಗೆ ಬಾರದೆ ನಷ್ಟಕ್ಕೆ ಗುರಿಯಾಗಿದ್ದಾರೆ. ಈಗ ಪುನಃ ಬ್ಯಾಂಕ್‌ಗಳು ಸಾಲ ಮರುಪಾವತಿಗೆ ಒತ್ತಾಯಿಸುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.
ರಾಜ್ಯ ಸರ್ಕಾರ ಬರ ಘೋಷಣೆ ಮಾಡಿದರೂ ರೈತರಿಗೆ ಬೆಳೆ ಹಾನಿ ಪರಿಹಾರ ಬಿಡುಗಡೆಯಾಗಿಲ್ಲ. ಕೂಡಲೇ ಬರ ಪರಿಹಾರ ಕಾಮಗಾರಿ ಆರಂಭಿಸಿ ಎನ್‌ಡಿಆರ್‌ಎ್ ನಿಯಮಾವಳಿಯಂತೆ ಪರಿಹಾರ ನೀಡಬೇಕು. ಬ್ಯಾಂಕ್‌ಗಳು ರೈತರಿಗೆ ಸಾಲ ಮರುಪಾವತಿಗೆ ಒತ್ತಾಯಿಸದಂತೆ ಆದೇಶ ಹೊರಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಕಟ್ಟಿಮನಿ, ಪದಾಕಾರಿಗಳಾದ ಜಿ.ಅಮರೇಶ, ಅಜೀಜ್ ಜಾಗೀರದಾರ್, ಕೆ.ಗಿರಿಲಿಂಗಸ್ವಾಮಿ, ಶಿವರಾಮ, ಅಡಿವೆಪ್ಪ, ಶಫೀಕ್ ಪಾಷಾ, ಸಿದ್ದಲಿಂಗಪ್ಪ ಪಾಲ್ಗೊಂಡಿದ್ದರು.