ಡಿ.ಕೆ.ಶಿವಕುಮಾರ್ ಅವರ ತೇಜೋವಧೆ ಮಾಡುವುದನ್ನು ನಿಲ್ಲಿಸಿ

DK Shivakumar
Published on

ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ತೇಜೋವಧೆ ಮಾಡುವುದನ್ನು ಜೆಡಿಎಸ್ ನಾಯಕರು ಮುಂದುವರಿಸಿದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ನಗರ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ಟಿ.ಶ್ರೀನಿವಾಸ್ ಎಚ್ಚರಿಸಿದರು.

ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ದೇವೇಗೌಡರು ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ಈ ಹಿಂದೆ ಇವರು ಮೈತ್ರಿ ಸರ್ಕಾರದಲ್ಲಿ ಎಚ್‌ಡಿಕೆ ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಅಸಮಾಧಾನವಿಲ್ಲದೆ ಡಿ.ಕೆ.ಶಿವಕುಮಾರ್ ಅವರ ಬೆನ್ನೆಲುಬಾಗಿ ನಿಂತಿದ್ದರು. ಈಗ ಶಿವಕುಮಾರ್ ಅವರ ರಾಜಕೀಯ ಏಳಿಗೆ ಸಹಿಸದೆ ಮುಂದೆ ಮುಖ್ಯಮಂತ್ರಿಯಾಗುತ್ತಾರೆಂಬ ಒಂದೇ ಕಾರಣಕ್ಕೆ ಹಗುರವಾಗಿ, ವೈಯಕ್ತಿಕವಾಗಿ ಮಾತನಾಡುವುದು ಶೋಭೆ ತರುವುದಿಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಖಂಡರಾದ ಎಚ್.ತೇಜಸ್ವಿಗೌಡ, ಕುಮಾರ್, ನಟರಾಜ್, ಪವನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net