

ಧಾರವಾಡ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿರುವ ಅವರು, ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಅಂಜುಮನ್ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆಯುತ್ತಿರುವ ಅಽವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚೆ ಆಗಬೇಕು. ಆದರೆ, ಶಾಸಕ ಯತ್ನಾಳ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ಕಾಲಹರಣ ಮಾಡಿದ್ದಾರೆ. ಇದು ಖಂಡನೀಯ ಎಂದರು.
ಇತ್ತೀಚೆಗೆ ನಡೆದ ಮುಸ್ಲಿಂ ಧರ್ಮ ಗುರುಗಳ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಗ್ರ ಸಂಘಟನೆಯೊAದಿಗೆ ಸಹಾನುಭೂತಿಯುಳ್ಳ ಮೌಲ್ವಿ ತನ್ವೀರ್ ಪೀರಾ ಅವರೊಂದಿಗೆ ವೇದಿಕೆ ಹಂಚಿಕೊAಡಿದ್ದಾರೆ ಎಂದು ಶಾಸಕ ಯತ್ನಾಳ ಆರೋಪಿಸಿದ್ದಾರೆ. ಹಾಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅದೇ ತನ್ವೀರ್ ಪೀರಾ ಅವರೊಂದಿಗೆ ಇರುವ ಫೋಟೊ ಬಿಡುಗಡೆ ಮಾಡಿದ ತಮಟಗಾರ, ಈ ಬಗ್ಗೆಯೂ ಯತ್ನಾಳ ತನಿಖೆ ಮಾಡಿಸಲಿ ಎಂದರು.