ಬಂಡೀಪುರದಲ್ಲಿ ಪ್ಲಾಸ್ಟಿಕ್ ಬಳಕೆ ತಡೆಯಿರಿ

10-GPT-1
ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದ ಯುವಕರು ಬಂಡೀಫುರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವಂತೆ ಡಾ.ರಮೇಶ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ರಘು, ಮಣಿ, ಜಗದೀಶ್ ಇತರರು ಇದ್ದರು.
Published on

ಗುಂಡ್ಲುಪೇಟೆ: ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ಅಗತ್ಯ ಕ್ರಮಕೈಗೊಳ್ಳುವಂತೆ ತಾಲೂಕಿನ ಬಾಚಹಳ್ಳಿ ಗ್ರಾಮದ ಯುವಕರು ಅರಣ್ಯ ಸಂರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಮುಖಂಡ ರಘು ನೇತೃತ್ವದಲ್ಲಿ ಬಂಡೀಪುರಕ್ಕೆ ಇತ್ತೀಚೆಗೆ ತೆರಳಿದ ಗ್ರಾಮಸ್ಥರು, ಹುಲಿ ಯೋಜನೆಯ ಕ್ಷೇತ್ರ ನಿರ್ದೇಶಕ ಡಾ.ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದರು. ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿರುವ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪರಿಸರ ಸೂಕ್ಷ್ಮ ಪ್ರದೇಶದಲ್ಲಿದ್ದು, ಪ್ರತಿ ದಿನವೂ ಸಾವಿರಾರು ಪ್ರವಾಸಿಗರ ಓಡಾಟದಿಂದ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದೆ. ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಾಗುತ್ತಿದ್ದು, ವನ್ಯಜೀವಿಗಳಿಗೆ ಮಾರಕವಾಗುತ್ತಿದೆ. ಆದ್ದರಿಂದ ಅರಣ್ಯ ಇಲಾಖೆಯು ಬಂಡೀಪುರ ವ್ಯಾಪ್ತಿಯಲ್ಲಿ ಕಡ್ದಾಯವಾಗಿ ಪ್ಲಾಸ್ಟಿಕ್ ಬಳಕೆ ತಡೆಗಟ್ಟಬೇಕು ಎಂಬ ಮನವಿ ಸಲ್ಲಿಸಿದರು.

ಕಾಡಂಚಿನಲ್ಲಿ ಜಮೀನು ಖರೀದಿಸುವ ಉದ್ಯಮಿಗಳು ಹಾಗೂ ಸೆಲೆಬ್ರಿಟಿಗಳು ವಾಸದ ಮನೆ ಕಟ್ಟಲು ಅನುಮತಿ ಪಡೆದು ದೊಡ್ಡ ದೊಡ್ಡ ಕಟ್ಟಡಗಳನ್ನು ನಿರ್ಮಿಸುತ್ತಿದ್ದಾರೆ. ಆದ್ದರಿಂದ ಸ್ಥಳೀಯರನ್ನು ಹೊರತುಪಡಿಸಿ ಬೇರೆಯವರಿಗೆ ಅನುಮತಿ ನೀಡಬಾರದು. ಅಕ್ರಮವಾಗಿ ತಲೆ ಎತ್ತಿರುವ ಹೋಂ ಸ್ಟೇಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಮಣಿ, ಜಗದೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net