

ಮದ್ದೂರು: ತಾಲೂಕಿನ ಹಳ್ಳಿಕೆರೆ ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಫಸಲು ನಾಶವಾಗಿದೆ.
ಗ್ರಾಮದ ರೈತ ಬೋರಯ್ಯ ಅವರಿಗೆ ಸೇರಿದ 4.20 ಎಕರೆ ಬಾಳೆ ನೆಲಕಚಚಿದೆ. ಸ್ಥಳಕ್ಕೆ ತಹಸೀಲ್ದಾರ್ ಕೆ.ಎಸ್.ಸೋಮಶೇಖರ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ ಆಗಮಿಸಿ ಪರಿಶೀಲನೆ ನಡೆಸಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.