ಅವಾಂತರ ಸೃಷ್ಟಿಸಿದ ಬಿರುಗಾಳಿ ಸಹಿತ ಮಳೆ

10M.D.R.5
ಮದ್ದೂರಿನ ಚನ್ನೇಗೌಡನದೊಡ್ಡಿ ಗ್ರಾಮದಲ್ಲಿ ಎತ್ತಿನಗಾಡಿ ಮೇಲೆ ಭಾರಿ ಗಾತ್ರದ ಮರ ಬಿದ್ದಿರುವುದು.
Published on

ಮದ್ದೂರು: ಪಟ್ಟಣದ ಸೇರಿದಂತೆ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಗುರುವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿದೆ.

ಪಟ್ಟಣದ ಚನ್ನೇಗೌಡನದೊಡ್ಡಿ ಗ್ರಾಮದ ಮಡಿಕೇರಿ ಮಹದೇವ ಅವರ ಎತ್ತಿನಗಾಡಿ ಮೇಲೆ ಭಾರಿ ಗಾತ್ರದ ಮರ ಬಿದ್ದ ಪರಿಣಾಮ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಇನ್ನು ತಾಲೂಕಿನ ಕೆಲವು ಹಳ್ಳಿಗಳಲ್ಲಿ ಮಣ್ಣಿನ ರಸ್ತೆ ಮೇಲೆ ಮಳೆ ನೀರು ನಿಂತ ಪರಿಣಾಮ ಸಂಚಾರಕ್ಕೆ ತೊಂದರೆಯಾಗಿ ಸಾರ್ವಜನಿಕರು ಪರದಾಡುವಂತಾಗಿತ್ತು. ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಮಳೆ ನೀರು ನಿಂತಿದ್ದರಿಂದ ರೋಗಿಗಳು ಆಸ್ಪತ್ರೆಯೊಳಗೆ ಹೋಗಲು ಪರದಾಡುವಂತಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net