ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ ಜನವರಿ 11ಕ್ಕೆ

30sri-1
Published on

ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಜನವರಿ 11ಕ್ಕೆ ಆಯೋಜಿಸಿರುವ ಸ್ತೋತ್ರ ತ್ರಿವೇಣಿ ಮಹಾ ಸಮರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಪ್ರವಚನ ಮಂದಿರದಲ್ಲಿ ಶಾಸಕ ಟಿ.ಡಿ.ರಾಜೇಗೌಡ ಬಿಡುಗಡೆ ಮಾಡಿದರು.

ನಂತರ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಮಹಾ ಸಮರ್ಪಣಾ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಭಾಗವಹಿಸಲಿದ್ದಾರೆ. ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಸನ್ಯಾಸ ಸ್ವೀಕಾರ ಮಾಡಿದ ಸುವರ್ಣ ಮಹೋತ್ಸವ ವರ್ಷವಾಗಿದ್ದು, ಜಗದ್ಗುರು ಶ್ರೀವಿಧುಶೇಖರ ಭಾರತೀ ಸ್ವಾಮೀಜಿಗಳ ಆಶಯದಂತೆ ಮಹಾಸಮರ್ಪಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇಲ್ಲಿನ ಜಗದ್ಗುರುಗಳು ಸನಾತನ ಧರ್ಮದ ಅಭಿವೃದ್ಧಿಗಾಗಿ ನಿರಂತರವಾಗಿ ಪರಿಶ್ರಮಿಸಿದ್ದು, ಶೃಂಗೇರಿ ಶಾರದಾ ಪೀಠದ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಕಳಕಳಿ ಅನನ್ಯ ಎಂದರು.

ಜಗದ್ಗುರುಗಳ ಆಪ್ತ ಸಹಾಯಕ ಶಂ.ನ.ಕೃಷ್ಣಮೂರ್ತಿ ಮಾತನಾಡಿ, ಸಾವಿರಾರು ಜನರು ಒಂದೆಡೆ ಸೇರುವುದರಿಂದ ಬಂದಿರುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ. ಸ್ವಯಂ ಸೇವಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಅಗತ್ಯವಿದ್ದು, ಶ್ರೀಮಠದೊಂದಿಗೆ ಎಲ್ಲರೂ ಕೈಜೊಡಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಬೇಕಿದೆ. ಬಂದ ಭಕ್ತಾದಿಗಳಿಗೆ ಶ್ರೀಮಠದಿಂದ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಮಿತಿ ರಾಜ್ಯ ಸಂಚಾಲಕ ಉಮೇಶ್ ಹರಿಹರ, ಪಪಂ ಅಧ್ಯಕ್ಷ ವೇಣುಗೋಪಾಲ್, ಹರಿಹರಪುರ ಪ್ರಬೋಧಿನಿ ಗುರುಕುಲದ ಮುಖ್ಯಸ್ಥರಾದ ಉಮೇಶ್ ಭಟ್, ಶಿವಶಂಕರ ಭಟ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net