ಪಿಗ್ಮಿ ಹಣ ದೋಚಿದ ಅಪರಿಚಿತರು

Thief
Published on

ಹಾನಗಲ್ಲ: ಪಿಗ್ಮಿ ಹಣ ಸಂಗ್ರಹಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮೇಲೆ ಅಪರಿಚಿತರು ಹಲ್ಲೆ ಮಾಡಿ ಆತನ ಬಳಿಯಿದ್ದ 16 ಸಾವಿರ ರೂ. ದೋಚಿಕೊಂಡು ಪರಾರಿಯಾದ ಘಟನೆ ತಾಲೂಕಿನ ತಿಳವಳ್ಳಿ ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

ಗ್ರಾಮದ ನೀಲಪ್ಪ ನಾಗಪ್ಪ ರ್ಬಾ (32) ಹಲ್ಲೆಗೊಳಗಾದ ವ್ಯಕ್ತಿ. ಈತ ಪಿಗ್ನಿ ಹಣ ಸಂಗ್ರಹಿಸಿಕೊಂಡು ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಈತನನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಬ್ಯಾಗ್​ನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net