ಮಾಲಗಾರನಹಳ್ಳಿಯಲ್ಲಿ ಬೀದಿ ನಾಟಕ ಪ್ರದರ್ಶನ

06M.D.R.4
Published on

ಮದ್ದೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಗುರುವಾರ ತಾಲೂಕಿನ ಮಾಲಗಾರನಹಳ್ಳಿ ಗ್ರಾಮದಲ್ಲಿ ಉಪ್ಪಾರದೊಡ್ಡಿ ಕಾರ್ಯ ಕ್ಷೇತ್ರದ ಗೆಳತಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಬೀದಿ ನಾಟಕ ಹಮ್ಮಿಕೊಳ್ಳಲಾಗಿತ್ತು.


ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಿ.ಆರ್.ಯೋಗೇಶ್ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇವಲ ಸಾಲ ಸೌಲಭ್ಯಗಳಿಗೆ ಮಾತ್ರ ಸೀಮಿತವಾಗದೆ, ಜ್ಞಾನ ವಿಕಾಸ, ವಾತ್ಸಲ್ಯ, ಕೆರೆ ಹೂಳೆತ್ತುವುದು, ನೀರಿನ ಸಂರಕ್ಷಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳು ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ರಾಜ್ಯದ ಮೂಲೆ ಮೂಲೆಗೂ ತಲುಪಿಸುತ್ತಿದೆ ಎಂದು ಪ್ರಶಂಸೆ ವ್ಯಕ್ತಡಿಸಿದರು.


ಸದಸ್ಯರಿಗೆ ನೀರಿನ ಮಿತ ಬಳಕೆ, ಮದ್ಯವರ್ಜನ ಶಿಬಿರ, ಜ್ಞಾನವಿಕಾಸ ಯೂ ಟ್ಯೂಬ್ ವಾಹಿನಿ ಮೂಲಕ ಸದಸ್ಯರಿಗೆ ತಲುಪುವ ಉಪಯುಕ್ತ ಮಾಹಿತಿಗಳು ಮತ್ತು ಪ್ರಗತಿ ನಿಧಿ ಸದ್ವಿನಿಯೋಗದ ಬಗ್ಗೆ ಸ್ನೇಹಜೀವಿ ಕಲಾತಂಡದವರು ನಾಟಕದ ಮೂಲಕ ಮನವರಿಕೆ ಮಾಡಿದರು.
ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ಶಿಲ್ಪಾ ಜಯಲಿಂಗಯ್ಯ ವಹಿಸಿದ್ದರು. ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ನಿರ್ದೇಶಕ ರಾಜೇಶ್, ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಅಪ್ಪಾಜಿ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ವಲಯ ಮೇಲ್ವಿಚಾರಕರು, ಗ್ರಾಮ ಪಂಚಾಯಿತಿ ಸದಸ್ಯರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net