ಜ.18ರಿಂದ ಮಂಗಳೂರು ಸ್ಟ್ರೀಟ್ food ಫಿಯೆಸ್ಟ

IMG-20241231-WA0079
Published on



ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಮೂರನೇ ವರ್ಷದ ಮಂಗಳೂರು ಸ್ಟ್ರೀಟ್ food ಫಿಯೆಸ್ಟ ಜ. 18 ರಿಂದ 22ರ ವರೆಗೆ ನಡೆಯಲಿದೆ.
ಜ. 18ರಂದು ಸಾಯಂಕಾಲ ಉದ್ಘಾಟನೆ ನೆರವೇರಲಿದ್ದು, ನಗರದ ಕರಾವಳಿ ಉತ್ಸವ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವದವರೆಗೆ ಪ್ರತಿದಿನ ಸಾಯಂಕಾಲ 4ರಿಂದ ರಾತ್ರಿ 10 ರವರೆಗೆ ‘ಆಹಾರೋತ್ಸವ’ ನಡೆಯಲಿದೆ ಎಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಹಿಂದೆ ಜ. 15 ರಿಂದ 19 ರ ವರೆಗೆ ನಿಗದಿಯಾಗಿದ್ದ ಸ್ಟ್ರೀಟ್ ುಡ್ ಫಿಯೆಸ್ಟದ ದಿನಾಂಕದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಜ. 17ರಂದು ಕರಾವಳಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದಿನಾಂಕದಲ್ಲಿ ಬದಲಾವಣೆ ಮಾಡಲು ಕಾರ್ಯಕ್ರಮದ ಆಯೋಜಕರು ತೀರ್ಮಾನಿಸಿದ್ದಾರೆ . 5 ದಿನಗಳ ಕಾಲ ಮನರಂಜನಾ ಕಾರ್ಯಕ್ರಮಗಳು ಇರಲಿದ್ದು, ಮಕ್ಕಳ ಆಟದ ಜೋನ್‌ಗೆ ವಿಶೇಷ ಪ್ರಾಧಾನ್ಯತೆ ನೀಡಲಾಗಿದೆ. ಏಕಕಾಲಕ್ಕೆ ಹಲವು ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು,
ಪ್ರತಿಭಾನ್ವಿತರಿಗಾಗಿ ‘ನಮ್ಮ ವೇದಿಕೆ- ನಿಮ್ಮ ಪ್ರತಿಭೆ’, ಸೆಲ್ಫಿ ಕೌಂಟರ್, ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲು ಅವಕಾಶವಿದೆ. ಸಾರ್ವಜನಿಕರ ಸುರಕ್ಷತೆಗೆ ವಿಶೇಷ ಆದ್ಯತೆಯ ಜತೆಗೆ ಆಹಾರೋತ್ಸವ ನಡೆಯುವಲ್ಲಿ ಸ್ವಚ್ಛತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಲೇಡಿಹಿಲ್ ಕಾನ್ವೆಂಟ್, ಲೇಡಿಹಿಲ್ ಚರ್ಚ್ ಆವರಣ, ಕರಾವಳಿ ಉತ್ಸವ ಮೈದಾನ, ಉರ್ವ ಕೆನರಾ ಹೈಸ್ಕೂಲ್ ಮೈದಾನದಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಪ್ರತಿಷ್ಠಾನದ ಅಧ್ಯಕ್ಷ ದಿವಾಕರ್ ಪಾಂಡೇಶ್ವರ್, ಸಂಘಟಕರಾದ ಯತೀಶ್ ಬೈಕಂಪಾಡಿ, ಅಶ್ವಿತ್ ಕೊಟ್ಟಾರಿ, ಲಲಿತ್ ಮೆಂಡನ್, ಜಗದೀಶ್ ಕದ್ರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net