ಪಿಎಂ ನರೇಂದ್ರ ಮೋದಿ ಕೈ ಬಲಪಡಿಸಿ

ldh kota
ಲಿಂಗದಹಳ್ಳಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತಯಾಚಿಸಿದರು. ಡಿ.ಎಸ್.ಸುರೇಶ್, ಎಸ್.ಎಂ.ನಾಗರಾಜ್, ಕೆ.ಆರ್.ಧ್ರುವಕುಮಾರ್, ಕೆ.ಆರ್.ಆನಂದಪ್ಪ ಇತರರಿದ್ದರು.
Published on

ಲಿಂಗದಹಳ್ಳಿ: ಗ್ರಾಮ ಪಂಚಾಯಿತಿಯಿಂದ ರಾಜಕೀಯ ಜೀವನ ಆರಂಭಿಸಿರುವ ಕೋಟ ಶ್ರೀನಿವಾಸ ಪೂಜಾರಿ ವಿಧಾನಪರಿಷತ್ ಸದಸ್ಯರಾಗಿ, ಮೂರು ಬಾರಿ ಸಚಿವರಾದರೂ ಅಧಿಕಾರದ ಮದ ತಲೆಗೇರಿಸಿಕೊಳ್ಳದೆ ಸರಳ, ಸಜ್ಜನರಾಗಿದ್ದಾರೆ. ಅವರಿಗೆ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ 50 ಸಾವಿರಕ್ಕೂ ಅಧಿಕ ಮತಗಳನ್ನು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ಹೇಳಿದರು.

ಗುರುವಾರ ಮತಯಾಚನೆ ಸಭೆಯಲ್ಲಿ ಮಾತನಾಡಿ, ಕಳೆದ ಬಾರಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ಲಿಂಗದಹಳ್ಳಿ ಹೋಬಳಿಯ 22 ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ತುಂಬಿಸುವ ಯೋಜನೆ, ತೀರ್ಥ ಹಳ್ಳಕ್ಕೆ 6 ಕಡೆ ಚೆಕ್ ಡ್ಯಾಂ ನಿರ್ಮಿಸಿ ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆ ಮೂಲಕ ಪ್ರತಿ ಮನೆಗೂ ನೀರೊದಗಿಸುವ ಕಾಮಗಾರಿ ಮುಕ್ತಾಯ ಹಂತದಲ್ಲಿದೆ ಎಂದು ಹೇಳಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ರಕ್ಷಿಸಲು ಹೊರಟಿರುವ ಕಾಂಗ್ರೆಸ್‌ಗೆ ಮತ ನೀಡಿದರೆ ಮುಂದೆ ಸಂಸತ್‌ನಲ್ಲೂ ಅದೇ ಘೋಷಣೆ ಮೊಳಗಲಿದೆ ಎಂದು ಎಚ್ಚರಿಕೆ ನೀಡಿದರು.
ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸೈನಿಕರಿಗೆ ಬೆಂಬಲ, ಭದ್ರತೆ ನಿಡುತ್ತಿರುವ ಪಿಎಂ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾನ್ನಾಗಿ ಮಾಡಲು ನನಗೆ ಮತ ನೀಡಿ ಬೆಂಬಲಿಸಿ ಎಂದು ಮನವಿ ಮಾಡಿದರು.
ಲಿಂಗದಹಳ್ಳಿ ಹೋಬಳಿ ವಿವಿಧ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ಮಾಜಿ ಶಾಸಕ ಎಸ್.ಎಂ.ನಾಗರಾಜ್, ಜಿಪಂ ಮಾಜಿ ಅಧ್ಯಕ್ಷ ಕೆ.ಆರ್.ಧ್ರುವಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ನರೇಂದ್ರ ಮತಯಾಚಿಸಿದರು.
ಜಿಪಂ ಮಾಜಿ ಅಧ್ಯಕ್ಷರಾದ ಕೆ.ಆರ್.ಆನಂದಪ್ಪ, ಚೈತ್ರಶ್ರೀ, ಗುಳ್ಳದಮನೆ ವಸಂತ, ಬಿಜೆಪಿ ಮುಖಂಡ ಓಂಕಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net