ಬಿಜೆಪಿ ಸಂಘಟನೆಯನ್ನು ಬಲಗೊಳಿಸಿ

FormerMLA Vishweshwar Hegde held a discussion with Kageri workers in a meeting of BJP workers held at Herur in Siddapur taluk, which strengthened the BJP organization.
Published on

ಸಿದ್ದಾಪುರ: ಬರುವ ಜಿಪಂ, ತಾಪಂ ಹಾಗೂ ಹಾಗೂ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಬೇಕಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ತಾಲೂಕಿನ ಹೇರೂರಿನಲ್ಲಿ ಅಣಲೇಬೈಲ್ ಜಿಪಂ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಅವರು ಮಾತನಾಡಿದರು.

ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿಯುವುದಕ್ಕೆ ಕಾರ್ಯಕರ್ತರ ಶ್ರಮ ಅತ್ಯವಶ್ಯ.

ಆದ್ದರಿಂದ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು, ಈ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನತೆಗೆ ತಿಳಿಸುವ ಕಾರ್ಯ ಆಗಬೇಕು.

ಈಗಾಗಲೇ ಕೇಂದ್ರ ಸರ್ಕಾರ 9ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಯನ್ನು ಜನರಿಗೆ ತಿಳಿಸುವ ಕೆಲಸ ಆಗುತ್ತಿದೆ.

ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೂಪಿಸಿದ್ದ ಹಲವು ಜನಪರ ಯೋಜನೆಗಳನ್ನು, ಕಾಯ್ದೆಗಳನ್ನು ರದ್ದುಗೊಳಿಸಿದ್ದು, ಇದು ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿಯನ್ನು ತಿಳಿಸುತ್ತದೆ ಎಂದು ಹೇಳಿದರು.

ಪ್ರಮುಖರಾದ ಎಂ.ವಿ. ಭಟ್ಟ ತಟ್ಟಿಕೈ, ಜಿಪಂ ಮಾಜಿ ಸದಸ್ಯ ಎಂ.ಜಿ. ಹೆಗಡೆ ಗೆಜ್ಜೆ ಕಿಬ್ಬಳ್ಳಿ, ಅಣ್ಣಪ್ಪ ಗೌಡ, ಆರ್.ಡಿ. ಹೆಗಡೆ ಜಾನ್ಮನೆ, ರಾಘವೇಂದ್ರ ಶಾಸ್ತ್ರಿ ಬಿಳಗಿ, ರಾಮ ಗೌಡ, ಮಹಾಬಲೇಶ್ವರ ಹೆಗಡೆ, ನಾರಾಯಣ ಹೆಗಡೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net