ಜಂಗಮ ಸಮಾಜವನ್ನು ಶೈಕ್ಷಣಿಕವಾಗಿ ಗಟ್ಟಿಗೊಳಿಸಿ

ಗಂಗಾವತಿಯಲ್ಲಿ ಹಮ್ಮಿಕೊಂಡಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯ ಎಚ್.ಎಂ.ಸಿದ್ರಾಮಯ್ಯಸ್ವಾಮಿ, ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಕಾರಟಗಿ ಘಟಕದ ಗೌರವಾಧ್ಯಕ್ಷ ಸಿದ್ದಯ್ಯಸ್ವಾಮಿ, ಅಧ್ಯಕ್ಷ ಶಿವಕುಮಾರ ಸ್ವಾಮಿ ಹಿರೇಮಠ, ಉಪಾಧ್ಯಕ್ಷರಾದ ಶಿವಪುತ್ರಯ್ಯ ಹಿರೇಮಠ, ಚಂದ್ರಯ್ಯಸ್ವಾಮಿ ಸೋಮನಾಳ ಇತರರಿದ್ದರು.

Published on

ಗಂಗಾವತಿ: ಪದಾಧಿಕಾರಿಗಳು ಸಮಾಜದ ಅಭಿವೃದ್ಧಿಗೆ ಗಮನಹರಿಸಿ ಸಂಘಟನಾತ್ಮಕವಾಗಿ ಸದೃಢರಾಗಬೇಕು ಎಂದು ಜಿಪಂ ಮಾಜಿ ಸದಸ್ಯ ಹಾಗೂ ಜಂಗಮ ಸಮಾಜದ ಹಿರಿಯ ಮುಖಂಡ ಎಚ್.ಎಂ.ಸಿದ್ರಾಮಯ್ಯಸ್ವಾಮಿ ಹೇಳಿದರು.

ನಗರದ ಕಂದಗಲ್ ಮಸೀದಿ ಏರಿಯಾದಲ್ಲಿ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಕಾರಟಗಿ ತಾಲೂಕು ಘಟಕದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜವನ್ನು ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಗಟ್ಟಿಗೊಳಿಸಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಸಹಕರಿಸಬೇಕು. ಎಂದು ಹೇಳಿದರು. ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ ಮಾತನಾಡಿ, ಪವಿತ್ರ ಸ್ಥಾನ ಹೊಂದಿದ ಜಂಗಮ ಸಮಾಜಕ್ಕೆ ಧಕ್ಕೆ ಆಗದಂತೆ ಎಚ್ಚರವಹಿಸಿ ಎಂದರು.

ಕಾರಟಗಿ ಘಟಕದ ಗೌರವಾಧ್ಯಕ್ಷ ಸಿದ್ದಯ್ಯಸ್ವಾಮಿ, ಅಧ್ಯಕ್ಷ ಶಿವಕುಮಾರ ಸ್ವಾಮಿ ಹಿರೇಮಠ, ಉಪಾಧ್ಯಕ್ಷರಾದ ಶಿವಪುತ್ರಯ್ಯಹಿರೇಮಠ, ಚಂದ್ರಯ್ಯಸ್ವಾಮಿ ಸೋಮನಾಳ, ಪ್ರಮುಖರಾದ ಚನ್ನಮಲ್ಲಯ್ಯ ಸ್ವಾಮಿ, ಎಚ್.ಎಂ.ವಿರೂಪಾಕ್ಷಯ್ಯ ಸ್ವಾಮಿ, ಎಚ್.ಎಂ.ಬಸವರಾಜ ಸ್ವಾಮಿ, ಪಾರ್ವತಿ ಸಿದ್ದರಾಮಯ್ಯ ಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net