ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಒತ್ತಡ ನಿವಾರಣೆ

29-02-Shiva-11
ರಾಯಚೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ.ಶಂಕರಗೌಡ ಪಾಟೀಲ್ ಉದ್ಘಾಟಿಸಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ, ಸಂಘದ ಜಿಲ್ಲಾಧ್ಯಕ್ಷ ಭೀಮಣ್ಣ ನಾಯಕ, ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದರ, ಪದಾಕಾರಿಗಳಾದ ಭೀಮರಾಜ ಹವಾಲ್ದಾರ್, ಮಲ್ಲಯ ಮುರಾರಿ, ಅಯ್ಯನಗೌಡ ಐರೆಡ್ಡಿ ಇದ್ದರು.
Published on

ರಾಯಚೂರು: ಪ್ರತಿನಿತ್ಯ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ನೌಕರರು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಕೆಲಸದ ಒತ್ತಡ ನಿವಾರಣೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ.ಶಂಕರಗೌಡ ಪಾಟೀಲ್ ಹೇಳಿದರು.
ಸ್ಥಳೀಯ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ನೌಕರರು ಇಂದು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು, ಒತ್ತಡ ನಿವಾರಣೆಗೆ ಇನ್ನಿತರ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿದೆ ಎಂದರು.
ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಆಡುವುದರ ಜತೆಗೆ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಹಲವಾರು ನೌಕರರು ತಮ್ಮದೇ ಆದ ಕ್ರೀಡಾ ಪ್ರತಿಭೆ ಹೊಂದಿದ್ದು, ಅದನ್ನು ಗುರುತಿಸಿ ಆ ಕ್ರೀಡೆಯಲ್ಲಿ ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ನೌಕರರ ಸಂಘದ ಮಾನ್ವಿ ತಾಲೂಕು ಅಧ್ಯಕ್ಷ ಶ್ರೀಶೈಲಗೌಡ ಮಾತನಾಡಿ, ಮುಖ್ಯಮಂತ್ರಿಗಳು 7ನೇ ವೇತನ ಆಯೋಗದ ವರದಿ ಜಾರಿ ಕುರಿತು ಸಕಾರಾತ್ಮಕವಾಗಿ ಸ್ಪಂದನೆ ಮಾಡಿದ್ದಾರೆ. ಸಂಘ ನೌಕರರ ಹಿತದೃಷ್ಟಿಯಿಂದ ಕ್ರೀಡಾಕೂಟವನ್ನು ಆಯೋಜಿಸಿದ್ದು, ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ ಪ್ರತಿಜ್ಞಾ ವಿ ಬೋಸಿದರು. ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ಭೀಮಣ್ಣ ನಾಯಕ, ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದರ, ಪದಾಕಾರಿಗಳಾದ ಭೀಮರಾಜ ಹವಾಲ್ದಾರ್, ಮಲ್ಲಯ ಮುರಾರಿ, ಅಯ್ಯನಗೌಡ ಐರೆಡ್ಡಿ, ಹುಸೇನಸಾಬ್, ವೆಂಕಟೇಶ, ದಂಡಪ್ಪ ಬಿರಾದರ, ಕ್ರೀಡಾಪಟು ನರಸಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net