ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ

Fine
Published on

ಸುಳ್ಯ: ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಮೇಲೆ ಸುಳ್ಯ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದು, ನೂತನವಾಗಿ ಸುಳ್ಯ ಠಾಣೆಗೆ ಉಪ ನಿರೀಕ್ಷಕರಾಗಿ ಬಂದಿರುವ ಸಂತೋಷ್ ಸಂಚಾರ ನಿಯಮ ಪಾಲಿಸದೇ ಇರುವ ವಾಹನ ಸವಾರರನ್ನು ನಿಯಂತ್ರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಈಗಾಗಲೇ ನಿಯಮ ಉಲ್ಲಂಘನೆ ಮಾಡಿರುವ ಸುಮಾರು 700ಕ್ಕೂ ಹೆಚ್ಚು ವಾಹನ ಚಾಲಕರ ಮನೆಗಳಿಗೆ ನೋಟೀಸು ನೀಡಲಾಗಿದೆ. ಠಾಣಾ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ನಗರ ಮತ್ತು ಗ್ರಾಮೀಣ ಭಾಗದ ರಸ್ತೆಗಳಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆ, ತ್ರಿಬಲ್ ರೈಡಿಂಗ್, ಅತಿಯಾದ ವೇಗ, ಸರಿಯಾದ ದಾಖಲೆ ಪತ್ರವಿಲ್ಲದೆ ಚಾಲನೆ, ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸದೆ ಚಾಲನೆ ಮುಂತಾದ ಸಂಚಾರ ನಿಯಮ ಉಲ್ಲಂಘನೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net