ಬಾಲ್ಯವಿವಾಹಕ್ಕೆ ಸಹಕರಿಸಿದರೆ ನಿರ್ಧಾಕ್ಷಿಣ್ಯ ಕ್ರಮ: ಜಿಪಂ ಸಿಇಓ ಎಚ್ಚರಿಕೆ

raichur
raichur
Published on

ರಾಯಚೂರು ಜಿಲ್ಲೆಯಲ್ಲಿ ಬಾಲ್ಯವಿವಾಹ ಸಂಪೂರ್ಣವಾಗಿ ನಿಷೇಧಿಸಬೇಕು ಹಾಗೂ ಒಂದು ವೇಳೆ ಬಾಲ್ಯವಿವಾಹಗಳಿಗೆ ಯಾರಾದರು ಸಹಕರಿಸುತ್ತಿರುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಿಪಂ ರಾಹುಲ್ ತುಕಾರಾಂ ಪಾಂಡ್ವೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಮಂಗಳವಾರ ಭೇಟಿ ನೀಡಿ ಸಿಡಿಪಿಒಗಳು, ಮಹಿಳಾ ಕಲ್ಯಾಣ ಅಧಿಕಾರಿ, ಮಕ್ಕಳ ರಕ್ಷಣಾ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲು ಇಲಾಖೆಯ ಅಧಿಕಾರಿಗಳು ಇದುವರೆಗೂ ಯಾವ ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಪಡೆದುಕೊಂಡು ಎಸ್‌ಎಎಂ ಹಾಗೂ ಎಂಎಎಅ ಪ್ರಕರಣಗಳನ್ನು ಕಡಿತಗೊಳಿಸಲು ರೂಪಸಿಲಾಗಿರುವ ಯೋಜನೆಗಳ ಬಗ್ಗೆ ಚರ್ಚಿಸಿದರು.

ಮಕ್ಕಳ ಆರೋಗ್ಯ ಕಾಪಾಡುವಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಜವಾಬ್ದಾರಿ ಹೆಚ್ಚು ಇದೆ. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ, ಆತ್ಮಸಾಕ್ಷಿಯಾಗಿ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳನ್ನು ಶುಚಿಯಾಗಿಡಲು ಹಾಗೂ ಕೇಂದ್ರಗಳನ್ನು ಆಕರ್ಷಕವಾಗಿ ನಿರ್ವಹಿಸುವ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ನೀಡುವ ಬಗ್ಗೆ ಕ್ರಮ ಜರುಗಿಸುವುದಾಗಿ ಸಿಡಿಪಿಒಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ ಕುಮಾರ, ವೆಂಕಟೇಶ, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net