

ಸುಂಟಿಕೊಪ್ಪ: ಗ್ರಾಮ ಹಾಗೂ ಸುತ್ತಮುತ್ತಲಿನಲ್ಲಿ ನಡೆಯುವ ಆನೈತಿಕ ಮತ್ತು ಅಕ್ರಮ ಚಟುವಟಿಕೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಸರ್ಕಾರವು ಮಹಿಳೆಯರ ರಕ್ಷಣೆಗಾಗಿ ಮತ್ತು ಸುರಕ್ಷತೆಯ ದಿಸೆಯಲ್ಲಿ ಹಲವು ಕಠಿಣ ರೀತಿಯ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರು ಕಾನೂನಿನ ಮಾಹಿತಿಯನ್ನು ಪಡೆದುಕೊಂಡು ಇತರರಿಗೆ ತಿಳಿಸುವಂತೆ ಠಾಣಾಧಿಕಾರಿ ಚಂದ್ರಶೇಖರ್ ಮಾಹಿತಿ ನೀಡಿದರು.
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್‌ಬೈಲ್ ಸರ್ಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಾನ್‌ಬೈಲ್ ಕಾರ್ಯಕ್ಷೇತ್ರದ ಸ್ವಸಹಾಯ ಸಂಘದ ಮಹಿಳೆಯರಿಗೆ ಜ್ಞಾನವಿಕಾಸ ಕೇಂದ್ರದ ವತಿಯಿಂದ ಜ್ವಲಂತ ಸಮಸ್ಯೆಗಳ ಬಗ್ಗೆ ಸದಸ್ಯರಿಗೆ ಮಾಹಿತಿ ಕಾರ್ಯಕ್ರಮ ಪಾಲ್ಗೊಂಡಿದ್ದ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ವಾಹನಗಳನ್ನು ಚಲಾಯಿಸುವಾಗ ವಾಹನದ ಪರವಾನಗಿ, ದಾಖಲಾತಿಗಳನ್ನು ವಾಹನದಲ್ಲಿ ಇರಿಕೊಂಡಿರಬೇಕು. ಸಂಚಾರ ನಿಯಮವನ್ನು ಪಾಲಿಸಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನಗಳನ್ನು ಚಲಾಯಿಸಲು ನೀಡಿ ಸಿಕ್ಕಿಬಿದ್ದಲ್ಲಿ ಪೊಲೀಸ್ ಹಾಗೂ ಸಾರಿಗೆ ಅಧಿಕಾರಿಗಳು ತಪಾಸಣೆ ಸಂದರ್ಭ ಸಿಕ್ಕಿಹಾಕಿಕೊಂಡಲ್ಲಿ ಪಾಲಕರಿಗೆ ದಂಡ ಹಾಗೂ ಜೈಲು ಶಿಕ್ಷೆಯಾಗಲಿದೆ. ಪಾಲಕರು ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಬಾರದು ಎಂದು ಕಿವಿಮಾತು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಮೇಲೆ ದೌರ್ಜನ್ಯ, ಇನ್ನಿತರ ಕಿರುಕುಳ ನೀಡುವುದು ಸಹ ಅಪರಾಧವಾಗಿದೆ. ನಿಮ್ಮ ಸುತ್ತಮುತ್ತಲಿನಲ್ಲಿ ಅಂತಹ ಪ್ರಕರಣಗಳು ಕಂಡುಬಂದ ಕೂಡಲೇ ತಿಳಿಸುವುದರಿಂದ ಮುಂದಾಗುವ ಅಪರಾಧಗಳನ್ನು ತಡೆಯುವ ದಿಸೆಯಲ್ಲಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿ ಚಂದ್ರಶೇಖರ್ ಸೂಚಿಸಿದರು.
ಯೋಜನೆ ಸಮನ್ವಯಧಿಕಾರಿ ಮಾಲಿನಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹತ್ತು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೃಷಿ ಅಧಿಕಾರಿ ರಾಕೇಶ್ ಮಾತನಾಡಿ, ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಾವು ವೈಯಕ್ತಿಕ ಬೆಳವಣಿಗೆಯನ್ನು ಕಂಡುಕೊಳ್ಳಬಹುದಾಗಿದೆ. ಭೂಮಿಯ ಫಲವತ್ತತೆ ಬಗ್ಗೆ ನಮಗೆ ಆರಿವು ಮುಖ್ಯ ಎಂದರು.