ಡೆಂಘೆ ಹಾವಳಿ ನಿಯಂತ್ರಣಕ್ಕೆ ಕಟ್ಟೆಚ್ಚರ

MDG- nayana
Published on

ಮೂಡಿಗೆರೆ: ಡೆಂಘೆ ಜ್ವರ ಅಲ್ಲಲ್ಲಿ ಕಾಣಿಸಿಕೊಂಡಿದ್ದು, ಎಲ್ಲೆಡೆ ಹರಡುವ ಮುನ್ನ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಡೆಂಘೆ ನಿಯಂತ್ರಣಕ್ಕೆ ಸಾಧ್ಯವಾದ ಎಲ್ಲ ಕ್ರಮಕೈಗೊಳ್ಳುವುದಾಗಿ ಶಾಸಕಿ ನಯನಾ ಮೋಟಮ್ಮ ತಿಳಿಸಿದರು.

ಜ್ವರ ಕಾಣಿಸಿಕೊಂಡ 84 ಮಂದಿಯಲ್ಲಿ 22 ಜನರಿಗೆ ಡೆಂೆ ಇರುವುದು ದೃಢಪಟ್ಟಿದೆ. ಡೆಂಘೆ ಜ್ವರದ ರೋಗಿಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ಉಪ ಕೇಂದ್ರಗಳಲ್ಲಿ ವೈದ್ಯರು ರಕ್ತ ತಪಾಸಣೆಯಲ್ಲಿ ತೊಡಗಿದ್ದಾರೆ. ಜ್ವರ ಕಾಣಿಸಿಕೊಂಡವರು ಆಸ್ಪತ್ರೆಗೆ ಕೂಡಲೇ ಭೇಟಿ ನೀಡಿದರೆ ಅವರ ರಕ್ತದ ಮಾದರಿ ಪರೀಕ್ಷೆ ಮಾಡುತ್ತಾರೆ. ಸಾರ್ವಜನಿಕರು ಜ್ವರದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಹೋಟೆಲ್ ಒಂದರಿಂದ ಡೆಂಘೆ ಹರಡುತ್ತಿದೆೆ. ಹೋಟೆಲ್ ಮುಚ್ಚಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಸುಳ್ಳು ಸುದ್ದಿಗೆ ಜನ ಕಿವಿಗೊಡಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಶುಚಿಗೊಳಿಸಲಾಗುತ್ತಿದೆ. ಪಟ್ಟಣದ ನಿವೇಶನಗಳಲ್ಲಿ ಬೆಳೆದಿರುವ ಪೊದೆಗಳನ್ನು ತೆರವುಗೊಳಿಸುವಂತೆ ಪಪಂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸೊಳ್ಳೆಗಳು ಉತ್ಪತ್ತಿಯಾಗದಂತೆ ಪಟ್ಟಣ ಪಂಚಾಯಿತಿ ಮತ್ತು ಗ್ರಾಪಂಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net