ಸೋಮವಾರಪೇಟೆಯಲ್ಲಿ ಮುಷ್ಕರ ಆರಂಭ

31spt1 (1)
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಎದುರು ಪೌರಸೇವಾ ನೌಕರರ ಮುಷ್ಕರದ ಸ್ಥಳಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಭೇಟಿ ನೀಡಿ ಆಹವಾಲು ಸ್ವೀಕರಿಸಿದರು. ಬಿ.ಆರ್.ಮಹೇಶ್, ಸತೀಶ್ ಇದ್ದರು.
Published on

ಸೋಮವಾರಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರ ನೌಕರರು ಕರ್ತವ್ಯ ನಿರ್ವಹಿಸದೆ ಪಟ್ಟಣ ಪಂಚಾಯಿತಿ ಎದುರು ಶನಿವಾರದಿಂದ ಮುಷ್ಕರ ಆರಂಭಿಸಿದ್ದಾರೆ.

ಬೇಡಿಕೆ ಈಡೇರಿಸುವವರೆಗೂ ಪಟ್ಟಣದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವುದಿಲ್ಲ. ಅಲ್ಲದೆ ಜೂ. 2ರಿಂದ ನೀರು ಸರಬರಾಜು ಕೆಲಸವನ್ನೂ ಮಾಡುವುದಿಲ್ಲ. ಪೌರಕಾರ್ಮಿಕರ ಹಲವು ಬೇಡಿಕೆಗಳು ಅನೇಕ ವರ್ಷಗಳಿಂದ ಈಡೇರಿಲ್ಲ. ಸಂಘದ ತೀರ್ಮಾನದಂತೆ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಲಾಗಿತ್ತು. ಗಡುವು ಮುಗಿದಿರುವ ಹಿನ್ನೆಲೆಯಲ್ಲಿ ಮುಷ್ಕರ ಪ್ರಾರಂಭಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಸೋಮವಾರಪೇಟೆ ಶಾಖೆ ಅಧ್ಯಕ್ಷ ಬಿ.ಜೆ.ಮಂಜುನಾಥ ಹೇಳಿದರು.

ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಸವಲತ್ತುಗಳನ್ನು ಯಾವುದೇ ಷರತ್ತುಗಳಿಲ್ಲದೆ ನೀಡಬೇಕು. ಪಟ್ಟಣ ಪಂಚಾಯಿತಿ ಹಾಗೂ ನಗರಸಭೆಯಲ್ಲಿ ಕೆಲಸ ಮಾಡುವ ಎಲ್ಲ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು. 2022ನೇ ಸಾಲಿನ ವಿಶೇಷ ನೇಮಕಾತಿ ಅಡಿ ಆಯ್ಕೆಯಾದ ಪೌರಸೇವಾ ನೌಕರರು ಮತ್ತು ಲೋಡರ್ಸ್‌ಗಳಿಗೆ ಎಸ್.ಎಫ್.ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು ಎಂಬುದು ಸೇರಿದಂತೆ ಅನೇಕ ಬೇಡಿಕೆಗಳನಿಟ್ಟು ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಮನವಿ ಪತ್ರ ಸ್ವೀಕರಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್.ಮಹೇಶ್, ಮುಖ್ಯಾಧಿಕಾರಿ ಸತೀಶ್, ಅರೋಗ್ಯ ನಿರೀಕ್ಷಕ ಜಾಸಿಂ ಖಾನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net