

ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಬಿಜೆಪಿ ಧಾರವಾಡ ಗ್ರಾಮಾಂತರ ಜಿಲ್ಲೆ ರೈತ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಚನ್ನಮ್ಮ ವೃತ್ತದಲ್ಲಿ ಕೆಲ ಸಮಯ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ತಹಸೀಲ್ದಾರ ಕಚೇರಿಗೆ ತೆರಳಿ ಅಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಂಗಾರು ಮಳೆಯಾಗದೆ ರೈತರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿ, ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಧಾರವಾಡ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಸವರಾಜ ಕುಂದಗೋಳಮಠ, ರಾಘವೇಂದ್ರ ಪಾಟೀಲ, ಚಂದ್ರಶೇಖರ ಅರಳಿ, ಯಲ್ಲಪ್ಪಗೌಡ ಪಾಟೀಲ, ಪ್ರತಾಪ ಪಾಟೀಲ ಹಾಗೂ ಮತ್ತಿತರರು ಪ್ರತಿಭಟನೆಯಲ್ಲ ಪಾಲ್ಗೊಂಡಿದ್ದರು.