ಬಜೆಟ್‌ನಲ್ಲಿ ಹೊರ ಗುತ್ತಿಗೆ ನೌಕರರಿಗೆ ಅನ್ಯಾಯ

Strike
Published on

ಕಾರವಾರ: ರಾಜ್ಯ ಬಜೆಟ್‌ನಲ್ಲಿ ತಮಗೆ ಅನ್ಯಾಯವಾಗಿದೆ ಎಂದು ದೂರಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರ ಗುತ್ತಿಗೆ ನೌಕರರ ಸಂಘದ ಸದಸ್ಯರು ಶನಿವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಕಳೆದ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ರಾಜ್ಯದ ಎಲ್ಲ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಗ್ಯಾರಂಟಿ ನೀಡಿತ್ತು. ಆದರೆ, ಅದು, ಜಾರಿಯಾಗಿಲ್ಲ. ಬದಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ಕಸದ ಚಾಲಕರು, ನೀರು ಸರಬರಾಜು ಸಹಾಯಕರು ಸೇರಿದಂತೆ ಸಾವಿರಾರು ಜನರಿಗೆ ಗುತ್ತಿಗೆ ಪದ್ಧತಿಯನ್ನು ಹೇರಿದೆ.

ಹೊರ ಗುತ್ತಿಗೆ ನೌಕರರ ಸಂಘದ ತೀವ್ರ ಹೋರಾಟದ ಪರಿಣಾಮ ಈ ಬಾರಿ ಹೊರ ಗುತ್ತಿಗೆ ನೌಕರರನ್ನು ನೇರ ಪಾವತಿ ಅಡಿ ತರಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಗುತ್ತಿಗೆ ಏಜೆನ್ಸಿಗೆ ಮಣಿದ ರಾಜ್ಯ ಸರ್ಕಾರ ಹೊರ ಗುತ್ತಿಗೆ ನೌಕರರಿಗೆ ದ್ರೋಹ ಎಸಗಿದೆ ಎಂದು ಆರೋಪಿಸಿದರು.

ಸರ್ಕಾರ ಶೀಘ್ರದಲ್ಲಿ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಇಲ್ಲದಿದ್ದಲ್ಲಿ. ಸ್ವಚ್ಛತೆ, ಕುಡಿಯುವ ನೀರಿನ ಪೂರೈಕೆ ಮುಂತಾದ ಅಗತ್ಯ ಸೇವೆಗಳನ್ನು ಬಂದ್ ಮಾಡಿ ಪ್ರತಿಭಟಿಸುವ ಎಚ್ಚರಿಕೆಯನ್ನು ಸಂಘಟನೆಯ ಸದಸ್ಯರು ನೀಡಿದರು. ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಂತೋಷ ತಳೇಕರ್, ದೇವೇಂದ್ರ ಮಾಳ್ಸೇಕರ್, ಽÃರಜ್ ನಾಯ್ಕ, ಅರುಣ ಹರಿಜನ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net