

ಕಾರ್ಕಳ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಬೆಂಬಲ ಸೂಚಿಸಿತು.
ಕಾರ್ಕಳ ತಾಲೂಕು ಕಚೇರಿ ಎದುರು ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ಗುರುವಾರ ಕಾರ್ಕಳ ಬಿಜೆಪಿ ಮಂಡಲ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ನೇತೃತ್ವದ ಬಿಜೆಪಿ ನಿಯೋಗ ಭೇಟಿ ನೀಡಿ ಅಹವಾಲು, ಮನವಿ ಸ್ವೀಕರಿಸಿದರು. ಗ್ರಾಮ ಆಡಳಿತ ಅಧಿಕಾರಿಗಳ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸುವುದಾಗಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮುಖಾಂತರ ಮುಂದಿನ ಬಜೆಟ್ ಅಧಿವೇಶನದಲ್ಲಿ ಸಮಸ್ಯೆ ಕುರಿತು ಧ್ವನಿಯಾಗಿ ಸರ್ಕಾರದ ಗಮನ ಸೆಳೆಯುವಂತೆ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಸಾಲ್ಯಾನ್, ಉದಯ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ, ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್, ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ, ಪುರಸಭಾ ಸದಸ್ಯರಾದ ಪಲ್ಲವಿ, ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್, ನಗರಾಧ್ಯಕ್ಷ ನಿರಂಜನ್ ಜೈನ್, ಸೋಜನ್ ಪಿ.ಜೇಮ್ಸ್, ಸೂರ್ಯಕಾಂತ್ ಶೆಟ್ಟಿ, ಮೋಹನ್ ಶೆಟ್ಟಿ, ಪ್ರದೀಪ್ ರಾಣೆ, ಮೋಹನ್ ಶೆಟ್ಟಿ ಬೋಳ, ಕಿರಣ್ ಶೆಟ್ಟಿ ಬೋಳ, ಸುರೇಶ್ ಅತ್ತೂರು ಉಪಸ್ಥಿತರಿದ್ದರು.