Excise ಅಕ್ರಮ ಹೆಚ್ಚಳ: 2 ನೌಕರರ ಮರು ನಿಯೋಜನೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

Excise
Published on

ಕಾರವಾರ: ತಾಲೂಕಿನ ಮಾಜಾಳಿ ಅಬಕಾರಿ (Excise )ತನಿಖಾ ಠಾಣೆಯ ಇನ್ಸ್ಪೆಕ್ಟರ್ ಸದಾಶಿವ ಕೊರ್ತಿ ಅವರನ್ನು ಬೇರೆ ಸ್ಥಳಕ್ಕೆ ನಿಯೋಜನೆ ಮಾಡಿರುವುದನ್ನು ಖಂಡಿಸಿ ಕರವೇ ಪ್ರವೀಣ ಶೆಟ್ಟಿ ಬಣದ ಪದಾಽಕಾರಿಗಳು ಅಬಕಾರಿ ಉಪ ಆಯುಕ್ತರ ಕಚೇರಿಯ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಚಾಲಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಾಜಾಳಿ ತನಿಖಾ ಠಾಣೆಯ ಇನ್ಸ್ಪೆಕ್ಟರ್ ಸದಾಶಿವ ಕೊರ್ತಿ ಹಾಗೂ ಸಿಬ್ಬಂದಿ ಹೇಮಚಂದ್ರ ವಿರುದ್ಧ ಚಿತ್ತಾಕುಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರನ್ನೂ ಬೇರೆ ಜಿಲ್ಲೆಗೆ ನಿಯೋಜನೆ ಮಾಡಲಾಗಿತ್ತು. ಆದರೆ, ಚಾಲಕರ ಸಂಘಟನೆಗಳು ಮಾಜಾಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡ ಬಳಿಕ ಸದಾಶಿವ ಕೊರ್ತಿ ಹಾಗೂ ಹೇಮಚಂದ್ರ ಅವರನ್ನು ಅಮಾನತು ಮಾಡಲಾಗಿತ್ತು. ಇಬ್ಬರ ಅಮಾನತು ಆದೇಶಕ್ಕೆ ಕೆಎಟಿ ತಡೆ ನೀಡಿದೆ.

Excise ಇನ್ಸ್‌ಪೆಕ್ಟರ್‌ ಮರು ನಿಯೋಜಿಸಿ

ಸದಾಶಿವ ಕೊರ್ತಿ ಒಬ್ಬ ಪ್ರಾಮಾಣಿಕ ಅಧಿಕಾರಿಯಾಗಿದ್ದು, ಅವರ ಮೇಲೆ ರಾಜಕೀಯ ಒತ್ತಡ ತಂದು ಅವರನ್ನು ವರ್ಗಾಯಿಸಲಾಗಿದೆ. ಇದರಿಂದ ಗೋವಾದಲ್ಲಿ ಅಕ್ರಮ ಮದ್ಯ ಸಾಗಣೆ ಹೆಚ್ಚಿದೆ ಎಂಬುದು ಕರವೇ ಆರೋಪ ಈ ಹಿನ್ನೆಲೆಯಲ್ಲಿ ಅವರನ್ನು ಮರು ನಿಯೋಜನೆ ಮಾಡಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಅಕ್ಷಯ ಎಸ್.ಬಿ.ಹಾಗೂ ಇತರರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net