ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಲಿತಾಂಶಕ್ಕೆ ಶ್ರಮಿಸಿ

Strive for a good score in SSLC
Strive for a good score in SSLC
Published on

ಬಾದಾಮಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕು ಜಿಲ್ಲೆಗೆ ಪ್ರಥಮ ಹಾಗೂ ಬಾಗಲಕೋಟೆ ಜಿಲ್ಲೆ ರಾಜ್ಯದಲ್ಲಿ ಉತ್ತಮ ಸ್ಥಾನ ದೊರಕಿಸಲು ಎಲ್ಲ ಶಿಕ್ಷಕರು ಈಗಿನಿಂದಲೇ ಪ್ರಯತ್ನಿಸಿ ಗುರಿ ಸಾಧಿಸಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಸಲಹೆ ನೀಡಿದರು.

ಪಟ್ಟಣದ ಎಸ್.ವಿ.ಪಿ. ಸಂಸ್ಥೆಯ ಬಸವಭವನದಲ್ಲಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಆರು ತಾಲೂಕಿನ ಇಂಗ್ಲಿಷ್ ಭಾಷೆ ಶಿಕ್ಷಕರಿಗೆ ಹಮ್ಮಿಕೊಂಡಿದ್ದ ಜಿಲ್ಲೆಯ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಡಾ.ರವೀಂದ್ರ ರೆಡ್ಡಿ ಹಾಗೂ ಎಂ.ವೈ.ಪೂಜಾರ ಮಾತನಾಡಿ, ಮುಂಬರುವ ಮಾರ್ಚ್/ಏಪ್ರಿಲ್ 2025 ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಆಗುವ ಹಾಗೂ ಪರೀಕ್ಷಾ ಭಯ ನಿವಾರಣೆ ಹಾಗೂ ಇಂಗ್ಲಿಷ್ ವಿಷಯದಲ್ಲಿ ಸರಳವಾಗಿ ಉತ್ತೀರ್ಣರಾಗುವ ಬೋಧನಾ ವಿಧಾನಗಳನ್ನು ಉತ್ತಮ ಲಿತಾಂಶ ತರುವಲ್ಲಿ ಆಂಗ್ಲ ಭಾಷಾ ಶಿಕ್ಷಕರು ಹೇಗೆ ಉಳಿದ 54 ದಿನಗಳಲ್ಲಿ ಪ್ರಯತ್ನ ಮಾಡಿದರೆ ಯಶಸ್ಸು ಸಾಧ್ಯ ಎಂದರು.

ಎಸ್.ಬಿ.ಎಂ. ಪದವಿ ಕಾಲೇಜಿನ ಸಹಪ್ರಾಧ್ಯಾಪಕ ಶಶಿಧರ ರವೀಂದ್ರ ಮೂಲಿಮನಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕ, ಎಸ್.ಎಸ್.ಎಲ್.ಸಿ.ನೋಡಲ್ ಅಧಿಕಾರಿ ಎಸ್.ಎಸ್.ಹಾಲವರ ಅವರು ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಪಂ ಸಿಇಒ ಶಶಿಧರ ಕುರೇರ, ಡಿಡಿಪಿಐ ಎಂ.ವಿವೇಕಾನಂದ ಅವರ ಸಂದೇಶಗಳನ್ನು ಸಭೆಯಲ್ಲಿ ಓದಿದರು. ವೇದಿಕೆಯ ಮೇಲೆ ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಉಜ್ವಲ ಬಸರಿ, ಅವಳಿ ಜಿಲ್ಲೆಯ ಹಾಲು ಒಕ್ಕೂಟದ ಅಧ್ಯಕ್ಷ ಈರಣ್ಣ ಕರಿಗೌಡರ, ಸರಕಾರಿ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯ ಅವಿನಾಶ ಮೇಟಿ, ಶಿಕ್ಷಣ ಸಂಯೋಜಕ ಬಿ.ಕೆ.ಚಿಮಲ್ ಹಾಜರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕರಾದ ವೈ.ವೈ. ಹಾವರಗಿ, ಸಂಗಮೇಶ ಗಣಾಚಾರಿ, ಮಮತಾ ಮೈಲಾರ ಕಾರ್ಯಕ್ರಮವನ್ನು ನಿರೂಪಿಸಿದರು. ಎಸ್.ಎಂ. ನದಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net