ಸರ್ಮತೋಮುಖ ಬೆಳವಣಿಗೆಗೆ ಶ್ರಮಿಸಿ

Strive for all-round development
ಹಿಟ್ನಳ್ಳಿಯ ಕೃಷಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ನೂತನ ವಿದ್ಯಾರ್ಥಿ ಸಂದ ಉದ್ಘಾಟನೆಯನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಪಿ.ಎಲ್​. ಪಾಟೀಲ ನೆರವೇರಿಸಿದರು. ಡಾ. ಭೀಮಪ್ಪ ಎ., ಡಾ. ಬಿ.ಎಂ. ಪಾಟೀಲ ಗುರೂಜಿ, ಡಾ. ರವೀಂದ್ರ ಬೆಳ್ಳಿ ಮತ್ತಿತರರಿದ್ದಾರೆ.
Published on

ವಿಜಯಪುರ: ವಿದ್ಯಾರ್ಥಿ ಸಂಗಳು ಸರ್ವತೋಮುಖ ಅಭಿವೃದ್ಧಿಗಾಗಿ ಶೈಣಿಕ, ಸ್ಪರ್ಧಾತ್ಮಕ, ಕ್ರೀಡೆ ಮತ್ತು ಸಾಂಸತಿಕ ೇತ್ರಗಳಲ್ಲಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡು ಸಂದ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಪಿ.ಎಲ್​. ಪಾಟೀಲ ಹೇಳಿದರು.

ನಗರ ಹೊರವಲಯದ ಹಿಟ್ನಳ್ಳಿಯ ಕೃಷಿ ಮಹಾವಿದ್ಯಾಲಯದಲ್ಲಿ ಭಾನುವಾರ ನೂತನ ವಿದ್ಯಾರ್ಥಿ ಸಂದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ತರಗತಿವಾರು ಸ್ಪರ್ಧೆ ಆಯೋಜಿಸಿ ಮಹಾವಿದ್ಯಾಲಯ ಮಟ್ಟದಲ್ಲಿ ಉತ್ತಮ ತಂಡ ಕಟ್ಟುವಂತೆ ಸಲಹೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಬೆಂಗಳೂರಿನ ಆರ್ಟ್​ ಆಫ್​ ಲಿವಿಂಗ್​ನ ಡಾ. ಬಿ.ಎಂ. ಪಾಟೀಲ ಗುರೂಜಿ ಮಾತನಾಡಿ, ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ, ಯೋಗ ಧ್ಯಾನದೊಂದಿಗೆ ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ.ಭೀಮಪ್ಪ ಎ. ಮಾತನಾಡಿದರು. ಇತ್ತೀಚೆಗೆ ವಿಶ್ವವಿದ್ಯಾಲಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ, ಸಹ ಸಂಶೋಧನಾ ನಿರ್ದೇಶಕ ಡಾ. ಅಶೋಕ ಸಜ್ಜನ, ಪ್ರಾಧ್ಯಾಪಕರಾದ ಡಾ. ಶ್ರೀಶೈಲ ಗೋಟ್ಯಾಳ, ವಿದ್ಯಾವತಿ ಯಡಹಳ್ಳಿ, ಡಾ. ಸಾವಿತ್ರಿ ಪಾಟೀಲ, ಚಂದ್ರಶೇಖರ ಸಿಂಧೂರ, ಸಹನಾ ಪಾಟೀಲ, ವಿದ್ಯಾರ್ಥಿ ಸಂದ ನೂತನ ಅಧ್ಯ ವೀರೇಶ ಹವಾಲ್ದಾರ, ಶಿವರಾಜ್​ ಮೇಟಿ, ಅಮೂಲ್ಯ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net