

ಬಾಗಲಕೋಟೆ: ಜಿಲ್ಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಲಿತಾಂಶ ಪಡೆಯವಂತೆ ಮಾಡಲು ಶ್ರಮಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.
ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು ಹಾಗೂ ಮುಖ್ಯಶಿಕ್ಷಕರ ಜತೆ ಗುರುವಾರ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಪರೀಕ್ಷೆ ಲಿತಾಂಶ ಸುಧಾರಣೆಗೆ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು. ಕಡಿಮೆ ಲಿತಾಂಶ ಹೊಂದಿದ ಶಾಲೆಗಳಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಲಿತಾಂಶ ಸುಧಾರಣೆಗೆ ಶಿಕ್ಷಕರು ಶ್ರಮಿಸುವ ಕೆಲಸವಾಗಬೇಕು ಎಂದರು.
ಶೌಚಗೃಹ, ಕುಡಿಯುವ ನೀರು, ಬಿಸಿಯೂಟ, ಶಾಲೆ ಆವರಣ ಸ್ವಚ್ಛತೆ, ಶಾಲೆಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿದ ಕುರೇರ ಅವರು ಮಕ್ಕಳಿಗೆ ಶೂ-ಸಾಕ್ಸ್, ಮಕ್ಕಳಿಗೆ ಸಮವಸ ವಿತರಣೆ ಕುರಿತು ಹಾಗೂ ಸಿವಿಲ್ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. ಶಾಲೆಗಳಲ್ಲಿ ಇರುವ ಪಾಠೋಪಕರಣಗಳ ಸದ್ಬಳಕೆ ಆಗಬೇಕು ಎಂದು ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ಬಿ.ಕೆ.ನಂದನೂರ, ಜಿಲ್ಲಾ ಉಪಸಮನ್ವಯಾಧಿಕಾರಿ ಜಾಸ್ಮೀನ್ ಕಿಲ್ಲೇದಾರ, ಶಿಕ್ಷಣಾಧಿಕಾರಿ ಎಚ್.ಜಿ.ಮಿರ್ಜಿ, ಅಕ್ಷರ ದಾಸೋಹ ಡಯಟ್‌ನ ಹಿರಿಯ ಉಪನ್ಯಾಸಕರು, ಕ್ಷೇತ್ರ ಸಮನ್ವಯಾಧಿಕಾರಿಗಳು, ಡಯಟ್ ಉಪನ್ಯಾಸಕರು, ವಿಷಯ ಪರಿವೀಕ್ಷಕರು ಸಭೆಯಲ್ಲಿ ಭಾಗವಹಿಸಿದ್ದರು.