ಸಮಾಜದ ಅಭಿವೃದ್ಧಿಗೆ ಶ್ರಮಿಸಿ

9 vikram 9
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಮಾಜದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಎಲ್ಲರೂ ಜಾಗೃತರಾಗಿ ಒಗ್ಗಟ್ಟಿನಿಂದ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ಭಾರತ ಹೈ ಸ್ಕೂಲ್ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಮರಾಠಾ ಸಮಾಜ 130 ವರ್ಷಗಳ ಇತಿಹಾಸ ಹೊಂದಿದೆ. ಈವರೆಗೆ ಸಮಾಜ ಅಭಿವೃದ್ಧಿಗೆ ಕಾರಣೀಕರ್ತರಾದ ಎಲ್ಲ ಹಿರಿಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಸಲ್ಲಿಸಲು ಸದಾ ಸಿದ್ಧನಾಗಿದ್ದೇನೆ ಎಂದರು.
ಇದೇ ಸಂದರ್ಭದಲ್ಲಿ ಮರಾಠಾ ಸಮುದಾಯವನ್ನು 3ಬಿ ಯಿಂದ 2ಎಗೆ ವರ್ಗಾಯಿಸುವಂತೆ ಸಂಸ್ಥೆ ವತಿಯಿಂದ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಸಂಸ್ಥೆ ಅಧ್ಯಕ್ಷ ಮನೋಹರ ಮೋರೆ ಅಧ್ಯಕ್ಷತೆ ವಹಿಸಿದ್ದರು.
ಪಾಲಿಕೆ ಸದಸ್ಯರಾದ ಶಂಕರ ಶೇಳಕೆ, ಮಯೂರ ಮೋರೆ, ಉಪಾಧ್ಯಕ್ಷ ಎಲ್ಲಪ್ಪ ಚವ್ಹಾಣ, ಸುಭಾಷ ಶಿಂಧೆ, ಮಲ್ಲೇಶಪ್ಪ ಶಿಂಧೆ, ಈಶ್ವರ ಪಾಟೀಲ, ಶಿವಾಜಿ ಸೂರ್ಯವಂಶಿ, ಸುಭಾಷ ಪವಾರ, ದತ್ತಾತ್ರೇಯ ಮೋಟೆ, ಅನಿಲಕುಮಾರ ಭೋಸ್ಲೆ, ಮಹೇಶ ಶಿಂಧೆ, ಪುರುಷೋತ್ತಮ ಜಾಧವ, ರಾಜು ಕಾಳೆ, ಸುನೀಲ ಮೋರೆ, ಪ್ರಸಾದ ಹಂಗಳಿಕೆ, ಪ್ರಕಾಶ ಘಾಟಗೆ, ಶಿವಾಜಿ ಸೂರ್ಯವಂಶಿ ಇತರರು ಇದ್ದರು.
ರಾಜು ಬಿರಜೆನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎಸ್. ಗಾಣಿಗೇರ, ಎಸ್.ಎಂ. ಸಂಕೋಜಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net