ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿ

h1-mahesh tenginakai
Published on

ಹುಬ್ಬಳ್ಳಿ: ಇಲ್ಲಿಯ ಉಣಕಲ್ಲಿನ ರಾಚಯ್ಯ ಚನ್ನಯ್ಯ ಚಿಕ್ಕಮಠ ಶಾಸಕರ ಮಾದರಿ ಶಾಲೆಯನ್ನು ಉಭಯ ಮಾಧ್ಯಮ ಉನ್ನತೀಕರಿಸಿದ ಪ್ರೌಢಶಾಲೆಯನ್ನಾಗಿಸಿದ ಹಿನ್ನೆಲೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಸೋಮವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಶ್ರಮಿಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಗಮನ ನೀಡಿ ಮುಂದುವರಿಯಂತೆ ನೋಡಿಕೊಳ್ಳಬೇಕು ಎಂದರಲ್ಲದೆ, ಶಾಲೆಯ ಅಭಿವೃದ್ಧಿಗೆ ಅನುದಾನ ಕೊಡುವ ಭರವಸೆ ನೀಡಿದರು.

ಶಾಲೆ ಮಹಾದಾನಿ ರಾಚಯ್ಯ ಚನ್ನಯ್ಯ ಚಿಕ್ಕಮಠ ಅವರು ಸಾನ್ನಿಧ್ಯ ವಹಿಸಿದ್ದರು.

ಮಹಾನಗರ ಪಾಲಿಕೆ ಸದಸ್ಯರಾದ ತಿಪ್ಪಣ್ಣ ಮಜ್ಜಿಗಿ, ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ಚನ್ನು ಪಾಟೀಲ, ಬಸವರಾಜ ಹೆಬ್ಬಳ್ಳಿ, ಕಲ್ಲಪ್ಪ ವಾಲೀಕಾರ, ಚನ್ನಬಸಪ್ಪ ಧಾರವಾಡಶೆಟ್ಟರ್, ಬಸವರಾಜ ಮಾಡಳ್ಳಿ, ಎಸ್‌ಡಿಎಂಸಿ ಅಧ್ಯಕ್ಷ ರಂಗನಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಗೀತಾ ಚುಳಕಿ, ಬಿಆರ್‌ಸಿ ಸಂತೋಷ ದಂಡಗಲ್, ಸಿ.ಎಸ್. ಹುಡೇದಮನಿ ಇತರರು ಇದ್ದರು. ವಿ.ಎಲ್. ಕುಲಕರ್ಣಿ ಸ್ವಾಗತಿಸಿದರು. ಐ.ಎಸ್. ಬಮ್ಮನಗೌಡ್ರ ನಿರೂಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net