

ಚಿತ್ರದುರ್ಗ: ಮಿಷನ್ ಇಂದ್ರಧನುಷ್ 5.0ರ ಮೂರನೇ ಸುತ್ತಿನ ಯಶಸ್ಸಿಗೆ ಶ್ರಮಿಸುವಂತೆ ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.
ನಗರದ ಚೇಳುಗುಡ್ಡ ಮಾರಮ್ಮನ ದೇವಾಲಯದ ಆವರಣದಲ್ಲಿ ಸೋಮವಾರ ಮಿಷನ್ ಇಂದ್ರಧನುಷ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಲಸಿಕೆ ವಂಚಿತ ಗರ್ಭಿಣಿ ಹಾಗೂ ಮಕ್ಕಳಿಗೆ ಲಸಿಕೆ ನೀಡಬೇಕು ಎಂದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ ಮಾತನಾಡಿ, ಜಿಲ್ಲೆಯಲ್ಲಿ ಅಭಿಯಾನದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮನೆ, ಮನೆ ಸಮೀಕ್ಷೆ ನಡೆಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಹಂತದಲ್ಲಿ ತರಬೇತಿ ನೀಡಲಾಗಿದೆ ಎಂದು ಹೇಳಿದರು.
825 ಗರ್ಭಿಣಿಯರು, ಎರಡು ವರ್ಷದೊಳಗಿನ 3416 ಮಕ್ಕಳು, 620 ಮಂದಿ 2-5 ವರ್ಷದ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದ್ದು, ಅ.9ರಿಂದ 14ರವರೆಗೆ ಲಸಿಕೆ ನೀಡಲಾಗುವುದು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿದರು. ನೆಹರು ನಗರ ಆರೋಗ್ಯ ಕೇಂದ್ರದ ಡಾ.ರಾಹುಲ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಧರ್, ಗೋಪಿ, ಪುನೀತ್, ಆರೋಗ್ಯ ಸುರಕ್ಷತಾ ಅಧಿಕಾರಿ ಅರುಂಧತಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.