ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ

ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಸಂಪರ್ಕ ಸಭೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿದರು. ಕಳಲೆ ಕೇಶವಮೂರ್ತಿ, ಶ್ರೀಕಂಠನಾಯ್ಕ, ಮಾರುತಿ, ಕೆ.ಎಂ.ಮಾದಪ್ಪ, ನಾಗೇಶ್ ರಾಜ್, ಸೋಮೇಶ ಮತ್ತಿತರರಿದ್ದರು.
ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಸಂಪರ್ಕ ಸಭೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿದರು. ಕಳಲೆ ಕೇಶವಮೂರ್ತಿ, ಶ್ರೀಕಂಠನಾಯ್ಕ, ಮಾರುತಿ, ಕೆ.ಎಂ.ಮಾದಪ್ಪ, ನಾಗೇಶ್ ರಾಜ್, ಸೋಮೇಶ ಮತ್ತಿತರರಿದ್ದರು.
Published on

ನಂಜನಗೂಡು: ಮತದಾರರು ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ನಂಜನಗೂಡು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ತಾಲೂಕಿನ ಹರದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹುಚ್ಚಗಣಿ, ಇಬ್ಜಾಲ, ಕಾಟೂರು, ಅಲ್ಲಯ್ಯನಪುರ ಹಾಗೂ ಬಸಾಪುರ ಗ್ರಾಮಗಳಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ನಂತರ ಹರದನಹಳ್ಳಿಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೂಲಸೌಕರ್ಯ ಸಮಸ್ಯೆಗಳನ್ನು ಆಲಿಸುವ ಸಲುವಾಗಿ ಪ್ರತಿಯೊಂದು ಗ್ರಾಮದಲ್ಲೂ ಸಭೆಗಳನ್ನು ನಡೆಸುತ್ತಿದ್ದು ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳನ್ನು ಹಳ್ಳಿಗಳಿಗೆ ಕರೆಸಿ ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಗ್ರಾಮಗಳಲ್ಲಿ ಆಗಬೇಕಾಗಿರುವ ಕೆಲಸಗಳನ್ನು ಪಟ್ಟಿ ಮಾಡಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದು ಆ ಮೂಲಕ ನುಡಿದಂತೆ ನಡೆದಿದ್ದೇವೆ ಎಂಬ ಹಿರಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಡೆದುಕೊಂಡಿದೆ. ಹಳ್ಳಿಗಳಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಅಧಿಕಾರಿಗಳು ಸ್ಪಂದಿಸದಿದ್ದರೆ ನೇರವಾಗಿ ನನ್ನನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠನಾಯ್ಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಾರುತಿ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಂ.ಮಾದಪ್ಪ, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್, ಹರದನಹಳ್ಳಿ ಸೋಮೇಶ, ಜಯರಾಮ್, ಡಿಎಸ್‌ಎಸ್‌ನ ಮಹೇಶ್, ಗುತ್ತಿಗೆದಾರ ಮಡಿಕೆಹುಂಡಿ ಶಿವಣ್ಣ, ಇಬ್ಜಾಲ ಕೆಂಡಗಣ್ಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ತಾಪಂ ಇಒ ರಾಜೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net