ಪಡುಬಿದ್ರಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಏ.17, 18ರಂದು ಮಾರಿಯಮ್ಮನ ದೃಢ ಸಂಪ್ರೋಕ್ಷಣೆ ನಡೆಯಲಿದೆ. ವಿದ್ವಾನ್ ಕೆ.ಜಿ.ರಾಘವೇಂದ್ರ ತಂತ್ರಿ ಮಾರ್ಗದರ್ಶನದಲ್ಲಿ, ದೇವಳದ ಪ್ರಧಾನ ತಂತ್ರಿ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ.ಕುಮಾರಗುರು ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕ ಕಲ್ಯಾ ಶ್ರೀನಿವಾಸ ತಂತ್ರಿ ಉಪಸ್ಥಿತಿಯಲ್ಲಿ ನೆರವೇರಲಿದೆ.
17ರಂದು ಬೆಳಗ್ಗೆ 9ಕ್ಕೆ ಪ್ರಾರ್ಥನೆ, ಪುಣ್ಯಾಹ, ನಾಂದಿ ಸಮಾರಾಧನೆ, ಮಾತೃಕಾ ಪೂಜೆ, ಗಣಪತಿ ಯಾಗ, ನವಗ್ರಹ ಯಾಗ. ಸಂಜೆ 5ಕ್ಕೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 6ರಿಂದ ಸಪ್ತಶತಿ ಪಾರಾಯಣ, ದುರ್ಗಾ ನಮಸ್ಕಾರ ಪೂಜೆ, ಅಷ್ಟಾವಧಾನ, ರಾತ್ರಿ 6.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ರಾತ್ರಿ 7.30ಕ್ಕೆ ಹಾಸ್ಯಮಯ ತುಳು ನಾಟಕ ಪ್ರದರ್ಶನ ನಡೆಯಲಿದೆ.
18ರಂದು ಬೆಳಗ್ಗೆ 7.30ರಿಂದ ಚತುಃಷಷ್ಠಿ, ಯೋಗಿನಿ ಮಂಡಲ ಪೂಜಾ, ಚತುಃಷಷ್ಠಿ ಯೋಗಿನಿ ಬಲಿ, ಚತುಃಷಷ್ಠಿ ಯೋಗಿನಿ ದೇವತಾ ಪಾಯಸಯಾಗ, ಬೆಳಗ್ಗೆ 11 ಗಂಟೆಗೆ ಪೂರ್ಣಾಹುತಿ, ಪಂಚವಿಂಶತಿ ಕಲಶ ಆರಾಧನೆ, ಕಲಶಾಭಿಷೇಕ, ಪ್ರಸನ್ನ ಪೂಜಾ, ಬೆಳಗ್ಗೆ 11.30ಕ್ಕೆ ಪ್ರಸಾದ ವಿತರಣೆ ನೆರವೇರಲಿದೆ ಎಂದು ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ತಿಳಿಸಿದ್ದಾರೆ.