ಲೋಕಸಭೆಗೆ ನಾನೂ ಪ್ರಬಲ ಸ್ಪರ್ಧಾಕಾಂಕ್ಷಿ: ಕರಡಿ ಸಂಗಣ್ಣ

29 HPT 4 Kardi sanaganna
Published on

ಹೊಸಪೇಟೆ: ಲೋಕಸಭೆ ಚುನಾವಣೆಗೆ ಕೊಪ್ಪಳ ಕ್ಷೇತ್ರದಲ್ಲಿ ನಾನು ಬಿಜೆಪಿಯ ಪ್ರಬಲ ಸ್ಪರ್ಧಾಕಾಂಕ್ಷಿ ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಆನಂದ ಸಿಂಗ್ ಟಿಕೆಟ್ ಆಕಾಂಕ್ಷಿಯಾಗಿರ ಬಹುದು. ಅವರಂತೆ ಪಕ್ಷದಲ್ಲಿ ಇನ್ನೂ ಅನೇಕರು ಟಿಕೇಟ್ ಬಯಸಿರಬಹುದು. ನನಗೆ ಮಾಹಿತಿ ಇಲ್ಲ. ಆದರೆ, ಪಕ್ಷದ ನಿರ್ಣಯವೇ ಅಂತಿಮ ನಿರ್ಧಾರ. ಪಕ್ಷ ಯಾರಿಗೆ ಟಿಕೇಟ್ ನೀಡಿದರೂ, ಅವರ ಗೆಲುವಿಗೆ ಶ್ರಮಿಸುತ್ತೇನೆ. ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಆಪರೇಷನ್ ಹಸ್ತದ ಕುರಿತು ಈಗ ಗುಲ್ಲೆದ್ದಿದೆ. ಬಿಜೆಪಿ ರಾಜ್ಯದಲ್ಲಿ ಸೋತಿದೆ. ಆದರೆ, ನಾವು ಸತ್ತಿಲ್ಲ. ಪ್ರತಿಪಕ್ಷಗಳನ್ನು ಹಗರುವಾಗಿ ಪರಿಗಣಿಸಬಾರದು. ರಾಜಕಾರಣದಲ್ಲಿ ಪಕ್ಷಾಂತರ ಸಹಜ ಎಂದು ಹೇಳಿದರು.
ಸಂಸದ ವೈ.ದೇವೇಂದ್ರಪ್ಪ ಜೊತೆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net