ಬಲಿಷ್ಟವಾಗಿದೆ ಭಾರತದ ಪ್ರಜಾಪ್ರಭುತ್ವ

15 LNG 05
ಲಿಂಗಸುಗೂರು ಸಹಾಯಕ ಆಯುಕ್ತರ ಕಚೇರಿ ಆವರಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೈಕ್ ರ‌್ಯಾಲಿಗೆ ಚಾಲನೆ ನೀಡಲಾಯಿತು. ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ, ಡಿಡಿಪಿಐ ಕೆ.ಡಿ ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ಹೂನೂರು, ತಾಪಂ ಇಒ ಉಮೇಶ, ಸಮಾಜ ಕಲ್ಯಾಣ ಅಧಿಕಾರಿ ರವಿ ಉಪ್ಪಾರ, ಅಲ್ಪ ಸಂಖ್ಯಾತ ಕಲ್ಯಾಣಾಧಿಕಾರಿ ಷಡಕ್ಷರಿ ಹಾದಿಮನಿ, ಶಿಕ್ಷಕರ ಸಂಘದ ಅಧ್ಯಕ್ಷ ಗುರು ಸಂಗಯ್ಯ ಗಣಾಚಾರಿ, ನಿಂಗಪ್ಪ ಪರಂಗಿ, ಸಂಜೀವಪ್ಪ ಹುನಕುಂಟಿ, ಮೋಹನ ಗೋಸ್ಲೆ, ಶಿವಪ್ಪ ಮಾಚನೂರು ಇತರರಿದ್ದರು.
Published on

ಲಿಂಗಸುಗೂರು: ಭಾರತದ ಪ್ರಜಾಪ್ರಭುತ್ವ ಗಟ್ಟಿಯಾಗಿದೆ. ಆಳುವವರು ಮತ್ತು ಆಳಲ್ಪಡುವವರು ಪ್ರಜೆಗಳೇ ಆಗಿರುವುದರಿಂದ ಹೆಚ್ಚು ಕಡಿಮೆ ಎಂಬ ತಾರತಮ್ಯವಿಲ್ಲ ಎಂದು ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ ಹೇಳಿದರು.

ಸಹಾಯಕ ಆಯುಕ್ತರ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ತಾಪಂ, ಶಿಕ್ಷಣ ಇಲಾಖೆ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೈಕ್ ರ‌್ಯಾಲಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಭಾರತದಲ್ಲಿ ಪ್ರಜಾಪ್ರಭುತ್ವ ತನ್ನದೇ ಆದ ಮಹತ್ವ ಹೊಂದಿದ್ದು ಅದನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕಿದೆ ಎಂದರು. ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಟನೆ ಕಾರ್ಯಕರ್ತರು ಸಂವಿಧಾನ ಪೀಠಿಕೆ ಓದಿ ಮಹತ್ವ ಸಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net