ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಜು.೨೬ಕ್ಕೆ

23 ckm 13 k.t.radhakrishna
ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಕೃಷ್ಣ ಮಾತನಾಡಿದರು.
Published on

ಚಿಕ್ಕಮಗಳೂರು: ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರದ ವಿರುದ್ಧ ಜು.೨೬ ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಕೃಷ್ಣ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ೩೨ ಸಾವಿರ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ೫ ಗ್ಯಾರಂಟಿ ಯೋಜನೆಗಳಿಗೆ ಬಳಸಿರುವುದಾಗಿ ಹೇಳಿದೆ. ಇದಕ್ಕೆ ರಾಜ್ಯಾದ್ಯಂತ ದಲಿತ ಸಂಘಟನೆಗಳಿAದ ವಿರೋಧವ್ಯಕ್ತವಾದರೂ ಸಹ ಸರ್ಕಾರ ಕಿವಿಗೊಡದೆ ನಿರ್ಲಕ್ಷö್ಯ ತಾಳಿದೆ. ಎಸ್ಸಿ, ಎಸ್ಟಿ ಹಣವನ್ನು ಅನ್ಯ ಉz್ದೆÃಶಗಳಿಗೆ ಬಳಸಬಾರದು ಎಂದು ಇದೇ ಕಾಂಗ್ರೆಸ್ ಸರ್ಕಾರ ಕಾಯ್ದೆ ಮಾಡಿದ್ದರೂ ಕೂಡ ಈಗ ಅದನ್ನೆಲ್ಲಾ ಗಾಳಿಗೆ ತೂರಿ ಇಂದು ಗ್ಯಾರಂಟಿ ಯೋಜನೆಗಳಿಗೆ ಹಣ ಬಳಸಿಕೊಂಡಿರುವುದು ಖಂಡನೀಯ ಎಂದರು.
ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಮಾತನಾಡಿ, ಮಹರ್ಷಿ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಮೀಸಲಿದ್ದ ೧೮೭ ಕೋಟಿ ರೂ.ಗಳನ್ನು ಈ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಮತ್ತೆ ನಿಗಮದ ಖಾತೆಗೆ ಹಣ ವಾಪಸ್ಸು ಹಾಕಿಸಲಾಗಿದೆ. ಈ ಹಗರಣದಲ್ಲಿ ಭಾಗಿಯಾಗಿರುವ ಸರ್ಕಾರಿ ಮತ್ತು ಬ್ಯಾಂಕಿನ ಅಧಿಕಾರಿಗಳು, ಮಾಜಿ ಸಚಿವ, ಶಾಸಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಜು.೨೬ ರಂದು ಜಿಲ್ಲಾ ಕೇಂದ್ರದ ಆಜಾದ್‌ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ದಲಿತಪರ ಸಂಘಟನೆಗಳ ಮುಖಂಡರು, ಕನ್ನಡ ಸೇನೆ ಮತ್ತಿತರ ಸಂಘಟನೆಗಳು ಬೆಂಬಲಿಸಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ಬಿಎಸ್‌ಪಿ ಮುಖಂಡರಾದ ಪರಮೇಶ್ವರ್, ಗಂಗಾಧರ, ಕುಮಾರ್, ಮಂಜುಳ, ವಸಂತ್, ಪಿ.ಕೆ.ಮಂಜುನಾಥ್, ರತ್ನಮ್ಮ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net