ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ಒತ್ತಾಯಿಸಿ ಹೋರಾಟ

PROTEST
Published on

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಬೇಕೆಂಬ ಮಸೂದೆ ಜಾಗೊಳಿಸುವ ನಿಟ್ಟಿನಲ್ಲಿ ಮಹಿಳೆಯರು ಹಾಗೂ ಸಾಮಾಜಿಕ ಸಮಾನತೆಯ ಕಾಳಜಿಯುಳ್ಳವರು ಹೋರಾಟ ನಡೆಸಬೇಕಾದ ಅಗತ್ಯವಿದೆ. ಈ ಸಂಬಂಧ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ಹೋರಾಟ ನಡೆಸಲಾಗುತ್ತಿದೆ ಎಂದು ಸಂಸ್ಥಾಪಕ ಅಧ್ಯಕ್ಷೆ ಎಚ್.ಎಲ್.ಯಮುನಾ ತಿಳಿಸಿದರು.

ಈ ಹಿಂದೆ ಪ್ರಧಾನಿಯಾಗಿದ್ದಾಗ ಎಚ್.ಡಿ.ದೇವೇಗೌಡರು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.37ರಷ್ಟು ಮೀಸಲಾತಿ ನೀಡುವ ಮಸೂದೆ ಮಂಡಿಸಿದರು. ಆದರೆ ಆ ವೇಳೆ ಹಲವು ಪಕ್ಷಗಳ ಒಕ್ಕೂಟದ ಸರ್ಕಾರ ಅಧಿಕಾರದಲ್ಲಿದ್ದ ಕಾರಣ ಅಭಿಪ್ರಾಯ ಭೇದದಿಂದ ಅಂಗೀಕರಿಸಲು ಸಾಧ್ಯವಾಗಿರಲಿಲ್ಲ. ಈಗ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಒಂದೇ ಸರ್ಕಾರ ಇರುವುದರಿಂದ ಮಸೂದೆ ಅಂಗೀಕಾರ ಮಾಡಬೇಕೆಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಮುಖಂಡರಾದ ಸುಶೀಲಾ ನಂಜಪ್ಪ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net