

-ಬೆಳಗಾವಿ, ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗ್ಯಾರಂಟಿ ಅಬ್ಬರ
ಬೆಳಗಾವಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಲ್ಲಿನ ಒಳಜಗಳವೇ ಬೆಳಗಾವಿ, ಚಿಕ್ಕೋಡಿ ಕಾಂಗ್ರೆಸ್ ಗೆಲ್ಲಿಸಲಿದೆ. ಚಿಕ್ಕೋಡಿ ಕ್ಷೇತ್ರದಲ್ಲಿ ನರೇಂದ್ರ ಮೋದಿ ಅಲೇ ಇಲ್ಲವೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಹರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಲೀಡ್ ಮತಗಳ ಅಂತರದಿಂದ ಗೆಲ್ಲಲಿದ್ದಾರೆ.
ಎರಡು ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಅಸಮಾಧಾನ ಹೆಚ್ಚಾಗಿದ್ದು, ಕಾಂಗ್ರೆಸ್ ಗೆ ವರದಾನವಾಗಿದೆ. ಬಿಜೆಪಿಒಳಜಗಳ ಕಾಂಗ್ರೆಸ್ ಗೆ ಹೆಚ್ಚು ಲಾಭ ತರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.