

ಕಾಸರಗೋಡು: ಕುಂಬಳೆ ಸನಿಹದ ಮುಟ್ಟಂನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಹಿರಿಯ ವಿದ್ಯಾರ್ಥಿಗಳ ತಂಡವೊಂದು ತರಗತಿ ಕೊಠಡಿಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ವಿದ್ಯಾರ್ಥಿಗಳ ವಿರುದ್ಧ ಕುಂಬಳೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಗಾಯಾಳು ಮಂಗಲ್ಪಾಡಿ ನಯಾಬಜಾರ್ ನಿವಾಸಿ ವಿದ್ಯಾರ್ಥಿಯ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ದೂರುದಾರ ವಿದ್ಯಾರ್ಥಿ ಶಾಲೆಗೆ ಮೊಬೈಲ್ ತಂದಿರುವ ಬಗ್ಗೆ ವಿದ್ಯಾರ್ಥಿನಿಯರ ತಂಡವೊಂದು ಪ್ರಾಂಶುಪಾಲರಿಗೆ ಮಾಹಿತಿ ನೀಡಿತ್ತು. ಪ್ರಾಂಶುಪಾಲರಿಗೆ ದೂರು ನೀಡಿದ ವಿದ್ಯಾರ್ಥಿನಿಯರನ್ನು ದೂರುದಾರ ವಿದ್ಯಾರ್ಥಿ ಪ್ರಶ್ನಿಸಿರುವುದಕ್ಕೆ ಹಿರಿಯ ವಿದ್ಯಾರ್ಥಿಗಳ ತಂಡ ಕೊಠಡಿಯೊಳಗೆ ಹಾಕಿ ಥಳಿಸಿರುವುದಾಗಿ ಗಾಯಾಳು ವಿದ್ಯಾರ್ಥಿ ದೂರಿನಲ್ಲಿ ತಿಳಿಸಿದ್ದಾನೆ.