ನೇಣು ಹಾಕಿದ ಸ್ಥಿತಿಯಲ್ಲಿ 10ನೇ ತರಗತಿ ಹುಡುಗಿ; ಜೊತೆಗಿದ್ದ ಯುವಕನೇ ಕೊಂದನಾ?

Untitled-1
Published on

ಕೋಲಾರ: ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿಯ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಅನುಮಾನ ಉಂಟಾಗಿದೆ. ಕೋಲಾರ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ವರದಿಯಾಗಿದೆ.

ಹತ್ತನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ (16) ಮೃತಪಟ್ಟಿದ್ದು, ಕೋಲಾರ ಜಿಲ್ಲೆಯ ಮಾಲೂರು ತಾಲೂಕು ನಡುಮಾಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಯುವತಿಯ ಶವ ನೇಣು ಹಾಕಿದ ಸ್ಥಿತಿಯಲ್ಲಿ ಕಂಡುಬಂದಿದ್ದರೂ ಇದರ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು ಕೊಲೆ ಆರೋಪ ಹೊರಿಸಿದ್ದಾರೆ.

ಇಂದು ಸಾಯುವ ಮೊದಲು ತೇಜಸ್ವಿನಿ ಗ್ರಾಮದ ಮಂಜುನಾಥ್ ಎಂಬ ಯುವಕನೊಂದಿಗೆ ಇದ್ದಿದ್ದು, ಆತನೇ ನೇಣು ಹಾಕಿ ಸಾಯಿಸಿ ಪರಾರಿ ಆಗಿರಬಹುದು ಎಂದು ಶಂಕಿಸಲಾಗಿದೆ. ಮಾತ್ರವಲ್ಲ ಈ ಘಟನೆಯಿಂದ ಕೋಪಗೊಂಡ ಗ್ರಾಮಸ್ಥರು ರೊಚ್ಚಿಗೆದ್ದು ಮಂಜುನಾಥ್ ಮನೇ ಮೆಲೆ ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net