ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿ

08 Sirwar 1
ಸಿರವಾರ ಎಬಿವಿಪಿಯಿಂದ ತಹಸಿಲ್ ಕಚೇರಿ ಶಿರಸ್ತೇದಾರ್ ಫಕೃದ್ಧಿನ್‌ಗೆ ಮನವಿ ಸಲ್ಲಿಸಲಾಯಿತು. ಎಬಿವಿಪಿ ಸಂಚಾಲಕ ಗುರುಕಿರಣ್ ಶೆಟ್ಟಿ, ಅಂಬುನಾಯಕ, ಅಂಜನೇಯ ನಾಯಕ, ಕೆ.ಅಯ್ಯನಗೌಡ ಪಾಟೀಲ್, ರಮೇಶ ನಾಯಕ, ಅನಿಲ್ ಕುಮಾರ ಇತರರಿದ್ದರು.
Published on

ಸಿರವಾರ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಒದಗಿಸುವಂತೆ ಒತ್ತಾಯಿಸಿ ಎಬಿವಿಪಿ ಸಂಘಟನೆಯಿಂದ ಪ್ರತಿಭಟನಾ ಮೆರವಣಿಗೆ ಬುಧವಾರ ನಡೆಸಿ,

ತಹಸಿಲ್ ಕಚೇರಿ ಶಿರಸ್ತೇದಾರ್ ಫಕೃದ್ಧಿನ್‌ಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರ ಏಕಾಏಕಿ ಶೇ.15 ಬಸ್ ಪ್ರಯಾಣ ದರ ಹೆಚ್ಚಳ ಮಾಡಿರುವುದು ಸರಿಯಲ್ಲ. ಇದರಿಂದ ಕೆಳ ವರ್ಗದ ಜನರಿಗೆ ಹೊರೆಯಾಗುತ್ತದೆ. ಶಕ್ತಿ ಯೋಜನೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಸರ್ಕಾರ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಿ, ಬಸ್ ಪ್ರಯಾಣ ದರ ಕಡಿಮೆ ಮಾಡಬೇಕು ಎಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net