ಇಲಿ ಪಾಷಾಣ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Published on

ಚಿಕ್ಕಬಳ್ಳಾಪುರ: ತಂದೆಯ ಸಾವಿನಿಂದ ಮನನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೌರಿಬಿದನೂರು ನಗರೆದ ನಾಗಿರೆಡ್ಡಿ ಲೇಔಟ್​ನ ಸ್ವರ್ಣಾ (22) ಮೃತೆ. ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಹಾಸ್ಟೆಲ್​ ಇಲಿ ಪಾಷಾಣ ಸೇವಿಸಿದ್ದು, ಅಸ್ವಸ್ಥಗೊಂಡಿದ್ದ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು .ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಸ್ವರ್ಣಾ ತಂದೆ 3 ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಆಕೆ ಮಾನಸಿಕ ಖಿನ್ನತೆಗೊಳಗಾಗಿದ್ದಳು ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net