ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

Published on

ಚಿಕ್ಕಬಳ್ಳಾಪುರ: ತಾಲೂಕಿನ ಪೇರೇಸಂದ್ರದ ಖಾಸಗಿ ಶಿಕ್ಷಣ ಸಂಸ್ಥೆಯ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೇರಳದ ವಯನಾಡಿನ ಮೊಹಮ್ಮದ್​ ಶಬ್ಬೀರ್​ (26) ಆತ್ಮಹತ್ಯೆ ಮಾಡಿಕೊಂಡವ. ಈತ ಆರ್​ಸಿಟಿ ಅಲೈಡ್​ ಸೈನ್ಸ್​ ಕೋರ್ಸ್​ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ. ಭಾನುವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇನ್ನೂ ಯುವತಿಯೊಬ್ಬಳು ಈತನ ಮೊಬೈಲ್​ ನಂಬರ್​ ಬ್ಲಾಕ್​ ಮಾಡಿ, ಮಾತಾಡದೇ ದೂರ ಉಳಿದಿದ್ದರಿಂದ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಪೆರೇಸಂದ್ರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net