ಹಾಸ್ಟೆಲ್​ನಲ್ಲೇ ನೇಣು ಹಾಕಿಕೊಂಡ ವಿದ್ಯಾರ್ಥಿ; ಬೆಂಗಳೂರಿನ ಡೈನಾಮಿಕ್ ಕರಣ್ ಸಾವು..

Karan
Published on

ತುಮಕೂರು: ವಿದ್ಯಾರ್ಥಿಯೊಬ್ಬ ಹಾಸ್ಟೆಲ್​​ನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ತುಮಕೂರಿನ ಹಾಸ್ಟೆಲ್​ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು ಮೂಲದ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ.

ಡೈನಾಮಿಕ್ ಕರಣ್ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ತುಮಕೂರಿನ ಎಸ್​ಸಿ-ಎಸ್​ಟಿ ಹಾಸ್ಟೆಲ್​ನಲ್ಲಿ ನೇಣು ಹಾಕಿಕೊಂಡಿದ್ದಾನೆ. ಈತ ಸಿದ್ಧಗಂಗಾ ಪಿಯು ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.

ಇಂದು ಸಂಜೆ 7 ಗಂಟೆ ಸುಮಾರಿಗೆ ಈತ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ತುಮಕೂರಿನ ಎನ್ಇಪಿಎಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎನ್ಇಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net