ವಿದ್ಯಾಭ್ಯಾಸದ ಒತ್ತಡ ಸಹಿಸಲಾಗದೆ ಸಾವಿಗೆ ಶರಣಾದ ವಿದ್ಯಾರ್ಥಿ!

Student
Published on

ಚಿಕ್ಕೋಡಿ: ವಿದ್ಯಾಭ್ಯಾಸವೇ ಒತ್ತಡವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ರಾಯಭಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮ ಮಾರುತಿ ಚಿದಾನಂದ ನಾವ್ಹಿ (22) ಮೃತ ದುರ್ದೈವಿ.

ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಖಾಸಗಿ ಕಾಲೇಜುಗಳಲ್ಲಿ ಬಿಎಸ್​ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾಭ್ಯಾಸ ಒತ್ತಡದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​​ ನೋಟಿನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ ಮೂರು ದಿನಗಳ ಹಿಂದೆ ಮನೆಗೆ ಆಗಮಿಸಿದ್ದ ಮಾರುತಿ, ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಮಗನನ್ನು ಕಳೆದುಕೊಂಡ ದಂಪತಿಗಳಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net