

ಚಿಕ್ಕಬಳ್ಳಾಪುರ: ಮಕ್ಕಳು ಕ್ಷುಲ್ಲಕ ಕಾರಣಗಳಿಗೆ ಪ್ರಾಣ ಕಳೆದುಕೊಳ್ಳುವಂಥ ಪ್ರಕರಣಗಳು ಹೊಸದೇನಲ್ಲ. ಮೊನ್ನೆಮೊನ್ನೆಯಷ್ಟೇ ಯುವಕನೊಬ್ಬ ಮೊಬೈಲ್ಫೋನ್ ಕೊಡಿಸಲಿಲ್ಲ ಎಂಬ ಕಾರಣಕ್ಕೇ ಬೆಂಕಿ ಹಾಕಿಕೊಂಡು ಜೀವ ಕಳೆದುಕೊಂಡಿದ್ದ.
ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ಹೋಗು ಎಂದಿದ್ದಕ್ಕೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರದ ವಾಪಸಂದ್ರ ಬಡಾವಣೆಯ ಬೇಬಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಚಿಕ್ಕಬಳ್ಳಾಪುರದ ವಾಪಸಂದ್ರ ಬಡಾವಣೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ಈಕೆ ಬರೀ ಶಾಲೆ ಹೋಗು ಎಂದ ಒಂದೇ ಮಾತಿಗೆ ಇಂಥದ್ದೊಂದು ಅನಾಹುತ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.